Ad Widget .

ಭಾರೀ ಮಳೆ/ ಸ್ಥಗಿತಗೊಂಡ ಅಮರನಾಥ ಯಾತ್ರೆ

ಸಮಗ್ರ ನ್ಯೂಸ್‌: ಭಾರೀ ಮಳೆ ಹಿನ್ನಲೆಯಲ್ಲಿ ಇಂದು ಗುಹಾ ದೇಗುಲಕ್ಕೆ ಎರಡೂ ಮಾರ್ಗಗಳಲ್ಲಿ ಅಮರನಾಥ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಬಾಲ್ವಾಲ್ ಮತ್ತು ಪಹಲ್ಲಾಮ್ ಮಾರ್ಗಗಳಲ್ಲಿ ಭಾರೀ ಮಳೆ ಸುರಿದ ಕಾರಣ ಯಾತ್ರಾರ್ಥಿಗಳ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಮುಂಜಾಗ್ರತಾ ಕ್ರಮವಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Ad Widget . Ad Widget .

ಇದುವರೆಗೆ 1.50 ಲಕ್ಷಕ್ಕೂ ಹೆಚ್ಚು ಮಂದಿ ಭಕ್ತರು 3,800 ಮೀಟರ್ ಎತ್ತರದ ಗುಹಾಂತರ ದೇಗುಲಕ್ಕೆ ಭೇಟಿ ನೀಡಿ ನೈಸರ್ಗಿಕವಾಗಿ ರೂಪುಗೊಂಡ ಮಂಜುಗಡ್ಡೆಯ ಲಿಂಗದ ದರ್ಶನವನ್ನು ಪಡೆದಿದ್ದಾರೆ. ಸುಮಾರು 4.5 ಲಕ್ಷಕ್ಕೂ ಹೆಚ್ಚು ಯಾತ್ರಿಕರು ಕಳೆದ ವರ್ಷ ಗುಹಾ ದೇಗುಲದಲ್ಲಿ ಪ್ರಾರ್ಥನೆ ಸಲ್ಲಿಸಿದರು.

Ad Widget . Ad Widget .

Leave a Comment

Your email address will not be published. Required fields are marked *