ತಮಿಳುನಾಡು ಬಿಎಸ್ಪಿ ಪಕ್ಷದ ರಾಜ್ಯಾಧ್ಯಕ್ಷ ಆರ್ಮ್ ಸ್ಟ್ರಾಂಗ್ ಬರ್ಬರ ಹತ್ಯೆ| ಎಂಟು ಮಂದಿ ಶಂಕಿತರು ಅರೆಸ್ಟ್

ಸಮಗ್ರ ನ್ಯೂಸ್: ತಮಿಳುನಾಡು ಬಹುಜನ ಸಮಾಜ ವಾದಿ ಪಕ್ಷದ ರಾಜ್ಯಾಧ್ಯಕ್ಷ ಆರ್ಮ್‌ಸ್ಟ್ರಾಂಗ್‌ ಬರ್ಬರವಾಗಿ ಹತ್ಯೆಯಾಗಿದ್ದಾರೆ. ಪೆರಂಬೂರ್‌ನಲ್ಲಿರುವ ಆರ್ಮ್‌ಸ್ಟ್ರಾಂಗ್‌ ಅವರ ನಿವಾಸದ ಬಳಿ ಆರು ಮಂದಿ ಅಪರಿಚಿತ ದಾಳಿಕೋರರು ದಾಳಿ ನಡೆಸಿ ಅವರನ್ನು ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.‌

Ad Widget ... ..

ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಎಂಟು ಶಂಕಿತರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಹತ್ಯೆಯ ಉದ್ದೇಶವನ್ನು ಕೂಲಂಕುಶವಾಗಿ ವಿಚಾರಣೆ ನಡೆಸಲಾಗುತ್ತದೆ ಎಂದು ಚೆನ್ನೈ ಹೆಚ್ಚುವರಿ ಆಯುಕ್ತ (ಉತ್ತರ) ಆಸ್ರಾ ಗರ್ಗ್‌ ಹೇಳಿದ್ದಾರೆ.

Ad Widget

ಆರ್ಮ್‌ಸ್ಟ್ರಾಂಗ್‌ ಅವರನ್ನು ಕೊಲೆಗೈದ ಬಳಿಕ ಆರೋಪಿಗಳು ಪರಾರಿಯಾಗುತ್ತಿರುವ ಸಿಸಿಟಿವಿ ದೃಶ್ಯಾವಳಿ ವೈರಲ್‌ ಆಗಿದೆ.
ಅಪರಿಚಿತರ ಗ್ಯಾಂಗ್‌ ಚೂರಿಯಿಂದ ಇರಿದು ಅವರನ್ನು ಹತ್ಯೆ ಮಾಡಿದೆ. ಘಟನೆ ಚೆನ್ನೈನ ಪೆರಂಬೂರ್‌ ಪ್ರದೇಶದ ಜನರನ್ನು ಬೆಚ್ಚಿಬೀಳಿಸಿದೆ.

Leave a Comment

Your email address will not be published. Required fields are marked *