ಸಮಗ್ರ ನ್ಯೂಸ್: ಉಕ್ರೇನ್ ರಷ್ಯಾ ಯುದ್ಧ ಆರಂಭವಾದ ಬಳಿಕ ಇದೇ ಮೊದಲ ಬಾರಿಗೆ ಪ್ರಧಾನಿ ಮೋದಿ ಇಂದಿನಿಂದ ರಷ್ಯಾ ಪ್ರವಾಸ ಕೈಗೊಂಡಿದ್ದಾರೆ. ಎರಡು ದಿನಗಳ ಕಾಲ ರಷ್ಯಾದಲ್ಲಿ ಹಲವು ಸುತ್ತಿನ ಮಾತುಕತೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಬುಧವಾರ ಪ್ರಧಾನಿ ಆಸ್ಟ್ರಿಯಾಕ್ಕೆ ತೆರಳಲಿದ್ದು, 46 ವರ್ಷಗಳ ಬಳಿಕ ಭಾರತದ ಪ್ರಧಾನಿಯೊಬ್ಬರು ಆಸ್ಟ್ರಿಯಾ ಪ್ರವಾಸ ಕೈಗೊಳ್ಳುತ್ತಿರುವುದು ಇದೇ ಮೊದಲಾಗಿದೆ.
ಭಾರತ-ರಷ್ಯಾ ವಾರ್ಷಿಕ ಶೃಂಗಸಭೆಯು ಮೋದಿಯವರ ರಷ್ಯಾ ಭೇಟಿಯ ಪ್ರಮುಖ ಅಜೆಂಡಾವಾಗಿದೆ. ರಷ್ಯಾ-ಉಕ್ರೇನ್ ಸಂಘರ್ಷದ ನಂತರದ ಮೊದಲ ಭೇಟಿಯಲ್ಲಿ ಮೋದಿ ಅವರು ರಷ್ಯಾ ಅಧ್ಯಕ್ಷ ಪ್ಲಾಡಿಮಿರ್ ಪುಟಿನ್ ಅವರೊಂದಿಗೆ ಈ ವಿಷಯದ ಬಗ್ಗೆ ಮಾತುಕತೆ ನಡೆಸಲಿದ್ದಾರೆ. ರಷ್ಯಾ ಅಧ್ಯಕ್ಷ ಪ್ಲಾಡಿಮಿರ್ ಪುಟಿನ್ ಇಂದು ನರೇಂದ್ರ ಮೋದಿ ಅವರಿಗೆ ಔತಣಕೂಟ ಏರ್ಪಡಿಸಲಿದ್ದಾರೆ. ನಾಳೆ ಶೃಂಗಸಭೆ ನಡೆಯಲಿದ್ದು, ಇದರಲ್ಲಿ ಉಭಯ ನಾಯಕರು ಭಾಗವಹಿಸಲಿದ್ದಾರೆ.