Ad Widget .

ಆಷಾಢ ಶುಕ್ರವಾರದಂದು ಚಾಮುಂಡೇಶ್ವರಿಗೆ ವಿಶೇಷ ಪೂಜೆ/ ಚಾಮುಂಡಿಬೆಟ್ಟಕ್ಕೆ ತೆರಳುವ ಭಕ್ತಾದಿಗಳಿಗೆ ಬಸ್ ಟಿಕೆಟ್ ಉಚಿತ

ಸಮಗ್ರ ನ್ಯೂಸ್‌: ಪ್ರತಿವರ್ಷದಂತೆ ಈ ವರ್ಷವೂ ಕೂಡ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಆಷಾಢ ಶುಕ್ರವಾರದಂದು ತಾಯಿ ಚಾಮುಂಡೇಶ್ವರಿಗೆ ವಿಶೇಷವಾದ ಪೂಜೆಯನ್ನ ಸಲ್ಲಿಸಲಾಗುತ್ತಿದ್ದು, ಈ ದಿನ ಚಾಮುಂಡಿಬೆಟ್ಟಕ್ಕೆ ತೆರಳುವ ಭಕ್ತಾದಿಗಳಿಗೆ ಬಸ್ ಟಿಕೆಟ್ ಉಚಿತವಾಗಿರಲಿದೆ.

Ad Widget . Ad Widget .

ಆಷಾಢ ಶುಕ್ರವಾರಕ್ಕಾಗಿ ಮೈಸೂರು ಜಿಲ್ಲಾಡಳಿತ ಮಂಡಳಿ ಭರದ ಸಿದ್ಧತೆ ನಡೆಸಿದ್ದು, ಚಾಮುಂಡಿ ಬೆಟ್ಟಕ್ಕೆ ಬೆಳಗ್ಗೆ 6ರಿಂದ ರಾತ್ರಿ 8ರವರೆಗೆ ಉಚಿತ ಬಸ್ ಸೇವೆ ಒದಗಿಸಲಿದೆ. ಲಲಿತ ಮಹಲ್ ಅರಮನೆ ಮೈದಾನದಿಂದ ನಲವತ್ತು ಬಸ್‌ಗಳು ಸಂಚರಿಸಲಿದ್ದು, ಚಾಮುಂಡಿ ಬೆಟ್ಟದಲ್ಲಿ ವಾಹನ ನಿಲುಗಡೆಗೆ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ.

Ad Widget . Ad Widget .

ಲಕ್ಷಾಂತರ ಭಕ್ತರು ಸಹ ಬೆಟ್ಟಕ್ಕೆ ಭೇಟಿ ನೀಡಿ ತಾಯಿ ಚಾಮುಂಡಿಗೆ ವಿಶೇಷ ಪೂಜೆ ಸಲ್ಲಿಸಿ ದರ್ಶನ ಪಡೆದು ಪುನೀತರಾಗುತ್ತಾರೆ. ಈ ಬಾರಿ ಚಾಮುಂಡಿ ಬೆಟ್ಟದಲ್ಲಿ ನಡೆಯುವ ಆಷಾಢ ಶುಕ್ರವಾರದ ಪೂಜೆಗೆ ಯಾವುದೇ ವಿಶೇಷ ಪಾಸ್ ಇರುವುದಿಲ್ಲ. ಖಾಸಗಿ ವಾಹನಗಳಿಗೆ ಪ್ರವೇಶ ಇರುವುದಿಲ್ಲ. ಸಾಮಾನ್ಯ ಸರತಿ ಸಾಲಿನಲ್ಲಿ ದೇವಸ್ಥಾನಕ್ಕೆ ಭೇಟಿ ನೀಡುವ ಭಕ್ತರು ವಿಶೇಷ ದರ್ಶನಕ್ಕಾಗಿ 50 ಮತ್ತು 300 ರೂ ಟಿಕೆಟ್ಗಳನ್ನು ಸಹ ಖರೀದಿಸಬಹುದಾಗಿದೆ.

Leave a Comment

Your email address will not be published. Required fields are marked *