ಜಮ್ಮು: ಸೇನೆಯ ಗುರಿಯಾಗಿಸಿ ಉಗ್ರರ ದಾಳಿ| ಗ್ರೆನೇಡ್ ಸ್ಪೋಟಕ್ಕೆ ನಾಲ್ವರು ಯೋಧರು ಹುತಾತ್ಮ

ಸಮಗ್ರ ನ್ಯೂಸ್: ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ದಾಳಿ ಹೆಚ್ಚಾಗುತ್ತಿದೆ. ಕಳೆದೆರಡು ತಿಂಗಳಲ್ಲಿ ಸೇನೆ ಮೇಲೆ ನಿರಂತರ ದಾಳಿ ನಡೆಯುತ್ತಿದೆ. ಇದೀಗ ಕಥುವಾ ಬಳಿ ಭಾರತೀಯ ಸೇನಾ ವಾಹನ ಗುರಿಯಾಗಿ ಉಗ್ರರು ಭೀಕರ ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ ನಾಲ್ವರು ಯೋಧರು ಸ್ಥಳದಲ್ಲೇ ಹುತಾತ್ಮರಾಗಿದ್ದಾರೆ.

. Ad Widget . Ad Widget

ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸೇನ ಪ್ರತಿ ದಾಳಿ ನಡೆಸುತ್ತಿದ್ದಂತೆ ಉಗ್ರರು ಕಾಡಿನೊಳಗೆ ಪರಾರಿಯಾಗಿದ್ದಾರೆ. ಈ ದಾಳಿಯ ಹೊಣೆಯನ್ನು ಜೈಶ್ ಇ ಮೊಹಮ್ಮದ್ ಉಗ್ರ ಸಂಘಟನೆ ಹೊತ್ತುಕೊಂಡಿದೆ.

. Ad Widget . . Ad Widget . Ad Widget

ಇಂದು ಮಧ್ಯಾಹ್ನ 3.30ರ ವೇಳೆಗೆ ಬದ್ನೋಟಾ ಗ್ರಾಮದ ಬಳಿ ಉಗ್ರರು ಭಾರತೀಯ ಸೇನೆ ಮೇಲೆ ದಾಳಿ ನಡೆಸಿದ್ದಾರೆ. ಮಚೆಡಿ ಕಿಂಡ್ಲಿ ಮಲ್ಹರ್ ರಸ್ತೆಯಲ್ಲಿ ಭಾರತೀಯ ಸೇನೆ ಎಂದಿನಂತೆ ಪಟ್ರೋಲಿಂಗ್ ನಡೆಸುತ್ತಿರುವ ವೇಳೆ ಉಗ್ರರು ಕಾದು ಕುಳಿತು ದಾಳಿ ನಡೆಸಿದ್ದಾರೆ. ಭಾರತೀಯ ಸೇನಾ ವಾಹನದ ಮೇಲೆ ಗ್ರೇನೆಡ್ ದಾಳಿ ನಡೆಸಿದ ಉಗ್ರರು ನಿರಂತರ ಫೈರಿಂಗ್ ನಡೆಸಿದ್ದಾರೆ.

Leave a Comment

Your email address will not be published. Required fields are marked *