ಮಣಿಪಾಲ: ಸಿಎ ವಿದ್ಯಾರ್ಥಿನಿ ಆತ್ಮಹತ್ಯೆ

ಸಮಗ್ರ ನ್ಯೂಸ್: ಸಿಎ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ವೈಯಕ್ತಿಕ ಕಾರಣದಿಂದ ಆತ್ಮಹತ್ಯೆ ಮಾಡಿಕೊಂಡ ಘಟನೆ ಹೆರ್ಗಾ ಗ್ರಾಮದಲ್ಲಿ ಜು.5ರಂದು ಸಂಜೆ ವೇಳೆ ನಡೆದಿದೆ.

Ad Widget ... ..

ಮೃತರನ್ನು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಹರಂದೂರು ಗ್ರಾಮದ ಮಹೇಶ್ ಎಂಬವರ ಮಗಳು ಶ್ರೀನಿಧಿ(20) ಎಂದು ಗುರುತಿಸಲಾಗಿದೆ.

Ad Widget

ಮಂಗಳೂರು ಮೂಡಬಿದಿರೆಯ ಆಳ್ವಾಸ್ ಕಾಲೇಜಿನಲ್ಲಿ ಸಿಎ ವ್ಯಾಸಂಗ ಮಾಡುತ್ತಿದ್ದ ಶ್ರೀನಿಧಿ, ಮನೆಯಲ್ಲಿ ಯಾರು ಇಲ್ಲದ ವೇಳೆ ಯಾವುದೋ ಕಾರಣಕ್ಕೆ ಜೀವನದಲ್ಲಿ ಜಿಗುಪ್ಸೆ ಹೊಂದಿ ಬಾಡಿಗೆ ಮನೆಯ ರೂಮ್‌ನಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment

Your email address will not be published. Required fields are marked *