Ad Widget .

ಕದ್ರಿ ಮಂಜುನಾಥನ ಸನ್ನಿಧಿಯಲ್ಲಿ ಯುವಕನ ಹುಚ್ಚಾಟ: ಅರ್ಚಕರ ಮೇಲೂ ಹಲ್ಲೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಪುಣ್ಯಕ್ಷೇತ್ರ ಕದ್ರಿ ಮಂಜುನಾಥನ ಸನ್ನಿಧಿಯಲ್ಲಿ ಯುವಕನೊಬ್ಬ ರಂಪಾಟವನ್ನೇ ನಡೆಸಿದ್ದಾನೆ. ಮಂಗಳೂರಿನ ಕದ್ರಿ ಶ್ರೀಮಂಜುನಾಥೇಶ್ವರ ದೇವಸ್ಥಾನದ ಪ್ರಾಂಗಣಕ್ಕೆ ನೇರ ಬೈಕ್ ಚಲಾಯಿಸಿಕೊಂಡು ಬಂದು ವ್ಯಕ್ತಿ ಬಳಿಕ ದೇವಸ್ಥಾನದ ಒಳಗೆ ಪ್ರವೇಶ ಮಾಡಿ ರಂಪಾಟ ಮಾಡಿದ್ದಲ್ಲದೇ ಅಣ್ಣಪ್ಪ ಸ್ವಾಮಿಯ ಗುಡಿಯ ಮುಂದೆ ಹೋಗಿ ಕಾಲಿನಿಂದ ಬಾಗಿಲು ಒದ್ದು ಅಪಚಾರ ಮಾಡಿದ್ದಾನಂತೆ.

Ad Widget . Ad Widget .

ಇದನ್ನು ನೋಡಿ ಪ್ರಶ್ನೆ ಮಾಡಿದ ಅರ್ಚಕರ ಮೇಲೂ ಹಲ್ಲೆಗೆ ಯತ್ನಿಸಿದ್ದಾನೆ. ದೈವಸ್ಥಾನದ ಬಳಿ ಇದ್ದ ಕತ್ತಿಯನ್ನು ಕೈಗೆತ್ತಿಕೊಂಡು ಕೆಲಕಾಲ ಆತಂಕದ ವಾತಾವರಣವನ್ನು ಸೃಷ್ಟಿಸಿದ್ದ. ದೇವಸ್ಥಾನದ ಮೇಲೆ ಹತ್ತಿ ಹಾನಿ ಮಾಡಿದ್ದಾನೆ. ಈ ವೇಳೆ ಸ್ಥಳದಲ್ಲಿದ್ದವರು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ ಎಂಬ ಮಾಹಿತಿ ಇದೆ.

Ad Widget . Ad Widget .

ಸದ್ಯ ಘಟನೆ ಬಗ್ಗೆ ಕದ್ರಿ ಠಾಣೆಗೆ ದೇವಸ್ಥಾನದ ಮುಖ್ಯಾಧಿಕಾರಿ ದೂರು ನೀಡಿದ್ದಾರೆ. ಯುವಕನ ವಶಕ್ಕೆ ಪಡೆದು ಪೊಲೀಸರು ವಿಚಾರಣೆಯನ್ನು ನಡೆಸುತ್ತಿದ್ದಾರೆ. ದಾಂಧಲೆ ನಡೆಸಿದ ಯುವಕ ಹೆಸರು ಪತ್ತೆಯಾಗಿಲ್ಲ. ಆದರೆ ಆತ ನಗರದ ಖಾಸಗಿ ಆಸ್ಪತ್ರೆಯಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಎನ್ನಲಾಗಿದೆ.

Leave a Comment

Your email address will not be published. Required fields are marked *