Ad Widget .

ಗೌತಮ್ ಗಂಭೀರ್ ಭಾರತ ಕ್ರಿಕೆಟ್ ತಂಡದ ನೂತನ ಕೋಚ್ ಆಗಿ ನೇಮಕ

ಸಮಗ್ರ ನ್ಯೂಸ್: ಭಾರತ ಕ್ರಿಕೆಟ್ ತಂಡದ ನೂತನ ಕೋಚ್ ಆಗಿ ಗೌತಮ್ ಗಂಭೀರ್ ಅವರನ್ನು ನೇಮಕ ಮಾಡಲಾಗಿದೆ.

Ad Widget . Ad Widget .

ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಬಿಸಿಸಿಐ ಕಾರ್ಯದರ್ಶಿ ಜೈ ಶಾ, “ಭಾರತೀಯ ಕ್ರಿಕೆಟ್ ತಂಡದ ನೂತನ ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್ ಅವರನ್ನು ಸ್ವಾಗತಿಸಲು ಅಪಾರ ಸಂತೋಷವಾಗಿದೆ” ಎಂದು ಪೋಸ್ಟ್ ಮಾಡಿದ್ದಾರೆ.

Ad Widget . Ad Widget .

“ಆಧುನಿಕ-ದಿನದ ಕ್ರಿಕೆಟ್ ವೇಗವಾಗಿ ವಿಕಸನಗೊಂಡಿದೆ. ಗೌತಮ್ ಈ ಬದಲಾಗುತ್ತಿರುವ ಕ್ರಿಕೆಟನ್ನು ಹತ್ತಿರದಿಂದ ನೋಡಿದ್ದಾರೆ. ತಮ್ಮ ವೃತ್ತಿಜೀವನದುದ್ದಕ್ಕೂ ವಿವಿಧ ಮಾದರಿಯ ಕ್ರಿಕೆಟ್ ನಲ್ಲಿ ಉತ್ತಮ ಪ್ರದರ್ಶನ ನೀಡಿರುವ ಗಂಭೀರ್ ಅವರು, ಭಾರತೀಯ ಕ್ರಿಕೆಟ್ ಅನ್ನು ಮುನ್ನಡೆಸಲು ಆದರ್ಶ ವ್ಯಕ್ತಿ ಎಂದು ನನಗೆ ವಿಶ್ವಾಸವಿದೆ. ಟೀಂ ಇಂಡಿಯಾಗಾಗಿ ಅವರ ಸ್ಪಷ್ಟ ದೃಷ್ಟಿಕೋನ, ಅಪಾರ ಅನುಭವಗಳು ಪ್ರತಿಷ್ಠಿತ ತಂಡದ ಕೋಚ್ ಹುದ್ದೆಯಲ್ಲಿ ಸಹಕಾರಿಯಾಗಲಿದೆ ಎಂಬ ವಿಶ್ವಾಸ ಬಿಸಿಸಿಐಗೆ ಇದೆ. ಅವರ ಈ ಕೋಚಿಂಗ್ ಪಯಣಕ್ಕೆ ಸ್ವಾಗತ” ಎಂದು ತಮ್ಮ ಎಕ್ಸ್ ಪೋಸ್ಟ್ನಲ್ಲಿ ಜೈ ಶಾ ತಿಳಿಸಿದ್ದಾರೆ.

Leave a Comment

Your email address will not be published. Required fields are marked *