Ad Widget .

ಬೆಂಗಳೂರು: ಮಾಜಿ ಸಚಿವ ನಾಗೇಂದ್ರ ಬಿ. ಮನೆ ಸೇರಿದಂತೆ ಹಲವು ಕಡೆ‌ ಇಡಿ ದಾಳಿ

ಸಮಗ್ರ ನ್ಯೂಸ್: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಇ.ಡಿ(ಜಾರಿ ನಿರ್ದೇಶನಾಲಯ) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರಿನ ವಿಜಯನಗರ, ಬಿ.ಇ ಎಲ್ ಸರ್ಕಲ್, ಜಗಜೀವನರಾಮನಗರ, ಕೋರಮಂಗಲ ಸೇರಿ ಹಲವು ಕಡೆ ಇ.ಡಿ ದಾಳಿ ನಡೆದಿದೆ.

Ad Widget . Ad Widget .

ಡಾಲರ್ಸ್‌ ಕಾಲೋನಿಯಲ್ಲಿರುವ ಮಾಜಿ ಸಚಿವ ಬಿ. ನಾಗೇಂದ್ರ ಅವರ ಅಪಾರ್ಟ್ ಮೆಂಟ್ ಮೇಲೆ ದಾಳಿ ನಡೆದಿದೆ. ವಾಲ್ಮೀಕಿ ನಿಗಮ ಅವ್ಯವಹಾರ ಸಂಬಂಧ ಇ.ಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬಳ್ಳಾರಿ ನಗರದ ನೆಹರೂ ಕಾಲೋನಿಯಲ್ಲಿರುವ ನಾಗೇಂದ್ರ ಅವರ ನಿವಾಸದ ಮೇಲೂ ದಾಳಿ ನಡೆದಿದೆ. ವಾಲ್ಮೀಕಿ ನಿಗಮದಲ್ಲಿ 187 ಕೋಟಿ ರೂ. ಅವ್ಯವಹಾರ ನಡೆದಿದೆ.

Ad Widget . Ad Widget .

ಯಲಹಂಕದಲ್ಲಿರುವ ಬಸವನಗೌಡ ದದ್ದಲ್ ನಿವಾಸದ ಮೇಲೂ ದಾಳಿ ನಡೆದಿದೆ. ಬೆಳಗ್ಗೆ 7 ಗಂಟೆಗೆ ಇಡಿ ತಂಡ ದಾಳಿ ನಡೆಸಿದೆ. ವಾಲ್ಮೀಕಿ ನಿಗಮ ಅವ್ಯವಹಾರ ಸಂಬಂಧ ಇಡಿಯಲ್ಲಿ ಪ್ರಕರಣ ದಾಖಲಾಗಿತ್ತು, ಹೀಗಾಗಿ ಇಡಿ ಅಧಿಕಾರಿಗಳು ನಡೆಸಿದ್ದಾರೆ.

Leave a Comment

Your email address will not be published. Required fields are marked *