ಮಂಗಳೂರು: ಪೇದೆಯಿಂದ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಇನ್ಸ್ ಪೆಕ್ಟರ್

ಸಮಗ್ರ ನ್ಯೂಸ್: ಕಿರಿಯ ಪೊಲೀಸ್‌ ಅಧಿಕಾರಿಗಳಿಂದ ಲಂಚ ಸ್ವೀಕರಿಸುತ್ತಿದ್ದ ಕೆ.ಎಸ್.ಆರ್.ಪಿ. ಇನ್ಸ್ ಪೆಕ್ಟರ್ ರೆಡ್‌ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಕೊಣಾಜೆ ಠಾಣಾ ವ್ಯಾಪ್ತಿಯ ಅಸೈಗೋಳಿ ಎಂಬಲ್ಲಿ ನಡೆದಿದೆ. ಕೆ.ಎಸ್.ಆರ್.ಪಿ. ಇನ್ಸ್ ಪೆಕ್ಟರ್ ಮೊಹಮ್ಮದ್ ಆರೀಸ್ ಲೋಕಾಯುಕ್ತ ಬಲೆಗೆ ಬಿದ್ದವ.

Ad Widget ... ..

ಗೆಸ್ಟ್ ಹೌಸ್ ಡ್ಯೂಟಿ ಹಾಕಲು ಲಂಚಕ್ಕೆ ಡಿಮಾಂಡ್ ಮಾಡಿದ್ದ ಆರೀಸ್ ರೂ 18 ಸಾವಿರ ಲಂಚದ ರೂಪದಲ್ಲಿ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಪೊಲೀಸರು ಖೆಡ್ಡಾಕ್ಕೆ ಕೆಡವಿದ್ದಾರೆ. ಗೆಸ್ಟ್ ಹೌಸ್ ಡ್ಯೂಟಿ ಹಾಕಬೇಕಿದ್ದರೇ ಪ್ರತಿ ತಿಂಗಳು 6 ಸಾವಿರ ರೂ. ಲಂಚ ನೀಡಲು ಆರೀಸ್‌ ಡಿಮ್ಯಾಂಡ್ ಮಾಡಿದ್ದರು.

Ad Widget

ಅದರಂತೆ ಇಂದು ಆರೀಸ್ 18 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಸಿಕ್ಕಿಬಿದ್ದಿದ್ದಾರೆ. ಲೋಕಾಯುಕ್ತ ಎಸ್.ಪಿ. ನಟರಾಜ್ , ಡಿವೈಎಸ್ಪಿ ಚೆಲುವರಾಜ್ ನೇತೃತ್ವದಲ್ಲಿ ದಾಳಿ ನಡೆದಿತ್ತು.

Leave a Comment

Your email address will not be published. Required fields are marked *