Ad Widget .

ಕನ್ನಡದ ಖ್ಯಾತ ನಿರೂಪಕಿ ಅಪರ್ಣಾ ಇನ್ನಿಲ್ಲ| ಕ್ಯಾನ್ಸರ್ ನಿಂದ ಅಪರ್ಣಾ ವಿಧಿವಶ

ಸಮಗ್ರ ನ್ಯೂಸ್: ಕನ್ನಡದ ಖ್ಯಾತ ನಿರೂಪಕಿ, ನಟಿ ಅಪರ್ಣಾ ಅನಾರೋಗ್ಯದಿಂದ ಇಂದು ಕೊನೆಯುಸಿರೆಳೆದಿದ್ದಾರೆ. ʼಮಸಣದ ಹೂವುʼ ಚಿತ್ರದ ಮೂಲಕ ಬೆಳಕಿಗೆ ಬಂದಿದ್ದ ಅವರು ʼಇನ್ಸ್ ಸ್ಪೆಕ್ಟರ್ ವಿಕ್ರಮ್ʼ ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿದ್ದರು. ಚಿತ್ರರಂಗದಲ್ಲಿ ಸಕ್ರಿಯರಾಗಿದ್ದ ಅವರು ನಿರೂಪಣಾ ಕ್ಷೇತ್ರವನ್ನು ಪ್ರವೇಶಿದ್ದರು. ಅಚ್ಚ ಕನ್ನಡದಲ್ಲಿ ತಮ್ಮ ನಿರೂಪಣೆಯನ್ನು ಮಾಡಿ ಹೆಸರುವಾಸಿಯಾಗಿದ್ದವರು.

Ad Widget . Ad Widget .

ಆದರೆ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅಪರ್ಣಾ ಅವರು ಬೆಂಗಳೂರಿನ ಬನಶಂಕರಿಯಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಪುಟ್ಟಣ್ಣ ಕಣಗಾಲ್ ಅವರ ಮಸಣದ ಹೂವು ಚಿತ್ರದ ಮೂಲಕ ಸಿನಿರಂಗಕ್ಕೆ ಕಾಲಿಟ್ಟಿದ್ದ ಅಪರ್ಣಾ ಅವರು ಹಿಂದಿರುಗಿ ನೋಡಲಿಲ್ಲ. ಸಾಲು ಸಾಲು ಸಿನಿಮಾಗಳು, ಕಿರುತೆರೆ, ವೇದಿಕೆಗಳಲ್ಲಿ ಮನೋಜ್ಞ ನಿರೂಪಣೆ ಮೂಲಕವೇ ಅವರು ಮನೆಮಾತಾಗಿದ್ದರು. ಅದರಲ್ಲೂ, 80 ಮತ್ತು 90ರ ದಶಕದಲ್ಲಿ ಕನ್ನಡ ಕಿರುತೆರೆ ನಿರೂಪಕಿಯಾಗಿ ಜನಪ್ರಿಯತೆ ಗಳಿಸಿದ್ದರು.

Ad Widget . Ad Widget .

1998ರಲ್ಲಿ ನಡೆದ ದೀಪಾವಳಿ ಕಾರ್ಯಕ್ರವೊಂದನ್ನು ಎಂಟು ಗಂಟೆಗಳ ನಿರೂಪಣೆ ಮಾಡಿ ದಾಖಲೆ ಬರೆದಿದ್ದರು. ಕಿರುತೆರೆಯಲ್ಲಿ ಮೂಡಲಮನೆ, ಮುಕ್ತ ಮುಂತಾದ ಧಾರಾವಾಹಿಗಳಲ್ಲಿ ನಟನೆ ಮಾಡಿದ್ದರು. 2013ರಲ್ಲಿ ಬಿಗ್ ಬಾಸ್ ಕನ್ನಡದ ಮೊದಲ ಸೀಸನ್ ನ ಸ್ಪರ್ಧೆಯಾಗಿದ್ದರು. 2015 ರಲ್ಲಿ ಸೃಜನ್ ಲೋಕೇಶ್ ನೇತೃತ್ವದಲ್ಲಿ ಆರಂಭವಾದ `ಮಜಾ ಟಾಕೀಸ್’ ಕಾರ್ಯಕ್ರಮದಲ್ಲಿ ವರಲಕ್ಷ್ಮಿ ಪಾತ್ರ ಮಾಡಿದ್ದರು.

Leave a Comment

Your email address will not be published. Required fields are marked *