Ad Widget .

ಟೀಂ ಇಂಡಿಯಾ ತ್ರೋಡೌನ್ ತಜ್ಞ ರಾಘವೇಂದ್ರ ಕುಕ್ಕೆ ಭೇಟಿ

ಸಮಗ್ರ ನ್ಯೂಸ್: ದಕ್ಷಿಣ ಭಾರತದ ಹೆಸರಾಂತ ನಾಗಕ್ಷೇತ್ರವಾದ ಕುಕ್ಕೆ ಸುಬ್ರಹ್ಮಣ್ಯದ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬುಧವಾರ ಟೀಂ ಇಂಡಿಯಾದ ತ್ರೋಡೌನ್ ತಜ್ಞ ರಾಘವೇಂದ್ರ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

Ad Widget . Ad Widget .

ಟೀಂ ಇಂಡಿಯಾದ ತ್ರೋಡೌನ್ ತಜ್ಞರಾಗಿರುವ ರಾಘವೇಂದ್ರ ಅವರು ಟಿ20 ವಿಶ್ವಕಪ್ ಗೆದ್ದ ಬಳಿಕ ಕುಕ್ಕೆ ದೇವಸ್ಥಾನಕ್ಕೆ ಆಗಮಿಸಿದ್ದು, ಈ ಹಿಂದೆ ದೇವಸ್ಥಾನಕ್ಕೆ ಬಂದ ಸಂದರ್ಭ ಟೀಂ ಇಂಡಿಯಾ ವಿಶ್ವಚಾಂಪಿಯನ್ ಆದರೆ ಸೇವೆ ನೆರವೇರಿಸುವುದಾಗಿ ಪ್ರಾರ್ಥನೆ ಸಲ್ಲಿಸಿದ್ದರು.ಈ ಪ್ರಕಾರ ಬುಧವಾರ ಸುಬ್ರಹ್ಮಣ್ಯನಿಗೆ ಸೇವೆ ಸಮರ್ಪಿಸಿದರು.

Ad Widget . Ad Widget .

ದೇವಳದ ಅರ್ಚಕ ರಾಮಕೃಷ್ಣ ನೂರಿತ್ತಾಯರು ಶಾಲು ಹೊದಿಸಿ ಮಹಾಪ್ರಸಾದ ಮತ್ತು ಮಹಾಭಿಷೇಕದ ಪ್ರಸಾದ ನೀಡಿದರು.ಬಳಿಕ ಶ್ರೀ ದೇವಳದ ಆಡಳಿತ ಕಚೇರಿಗೆ ತೆರಳಿದ ಅವರನ್ನು ದೇವಳದ ಸಹಾಯಕ ಕಾರ್ಯನಿರ್ವಹಣಾಧಿಕಾರಿ ಯೇಸುರಾಜು ಸ್ವಾಗತಿಸಿದರು.

Leave a Comment

Your email address will not be published. Required fields are marked *