ಮೂತ್ರ ವಿಸರ್ಜನೆ ಮಾಡುತ್ತಿದ್ದ ವೇಳೆ IBX ಬೇಲಿಯಿಂದ ವಿದ್ಯುತ್ ಶಾಕ್| ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಸಮಗ್ರ ನ್ಯೂಸ್: ಮೂತ್ರ ವಿಸರ್ಜನೆ ಮಾಡುತ್ತಿದ್ದ ವೇಳೆ ವಿದ್ಯುತ್ ಶಾಕ್ ತಗುಲಿ ಯುವಕ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯ ‌ರಿಪ್ಪನ್‌ಪೇಟೆಯ ಗವಟೂರಿನ ಹಳೂರು ಗ್ರಾಮದಲ್ಲಿ ನಡೆದಿದೆ.

Ad Widget ... ..

ಕಾರ್ತಿಕ್ ಎಸ್ (19) ಮೃತಪಟ್ಟ ಯುವಕ. ಶುಕ್ರವಾರ ಬೆಳಗಿನಜಾವ ಮನೆ ಮುಂಭಾಗದಲ್ಲಿ ಘಟನೆ ನಡೆದಿದೆ. ಮನೆ ಮುಂಭಾಗದ IBX ಬೇಲಿ ಬಳಿಯಲ್ಲಿ ಮೂತ್ರ ವಿಸರ್ಜನೆ ಮಾಡುವಾಗ ಕರೆಂಟ್ ಶಾಕ್ ಹೊಡೆದಿದೆ.

Ad Widget

ಮನೆ ಮುಂಭಾಗದ ಬೇಲಿ ಮೇಲೆ ವಿದ್ಯುತ್ ವೈರ್ ತುಂಡಾಗಿ ಬಿದ್ದಿತ್ತು. ಏಕಾಏಕಿ ವಿದ್ಯುತ್ ಪ್ರವಹಿಸಿ ಬೇಲಿಯ ಮೇಲೆ ಬಿದ್ದ ಯುವಕನನ್ನು ತಕ್ಷಣ ಸ್ಥಳೀಯ ಆಸ್ಪತ್ರೆಗೆ ಸಾಗಿಸಿದರೂ ಬದುಕುಳಿಯಲಿಲ್ಲ. ಕಾರ್ತಿಕ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಥಮ ಬಿಬಿಎ ವ್ಯಾಸಾಂಗ ಮಾಡುತಿದ್ದ. ರಿಪ್ಪನ್ ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Comment

Your email address will not be published. Required fields are marked *