Ad Widget .

ಮಾಜಿ ಶಾಸಕ ಡಿ.ಎಸ್ ವೀರಯ್ಯರನ್ನು ಬಂಧಿಸಿದ ಸಿಐಡಿ

ಸಮಗ್ರ ನ್ಯೂಸ್: ಮಾಜಿ ಶಾಸಕ ಡಿ.ಎಸ್. ವೀರಯ್ಯ ಅವರನ್ನು ಸಿಐಡಿ ಬಂಧಿಸಿದೆ. ದೇವರಾಜ ಅರಸು ಟ್ರಕ್ ಟರ್ಮಿನಲ್ ಲಿ. ಹಗರಣಕ್ಕೆ ಸಂಬಂಧಿಸಿದಂತೆ ಅವರನ್ನು ಬಂಧಿಸಲಾಗಿದೆ. ವೀರಯ್ಯ ಅಧ್ಯಕ್ಷರಾಗಿದ್ದಾಗ 47 ಕೋಟಿ ರೂಪಾಯಿ ಹಗರಣ ನಡೆದ ಆರೋಪವಿದ್ದು, ಇದರ ತನಿಖೆ ಹಿನ್ನೆಲೆಯಲ್ಲಿ‌ ಬಂಧನ ಮಾಡಲಾಗಿದೆ.

Ad Widget . Ad Widget .

2021 ರಿಂದ 2023ರ ನಡುವೆ ನಡೆದಿದೆ ಎನ್ನಲಾಗಿರುವ ಅಕ್ರಮದ ಕುರಿತಾಗಿ ಹಾಲಿ ವ್ಯವಸ್ಥಾಪಕ ನಿರ್ದೇಶಕರು ವಿಲ್ಸನ್ ಗಾರ್ಡನ್ ಠಾಣೆಗೆ ದೂರು ನೀಡಿದ್ದರು. 2023ರ ಸೆಪ್ಟಂಬರ್ 23ರಂದು ಎಫ್‌ಐಆರ್ ದಾಖಲಾಗಿದ್ದು, ಇದೇ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ವಹಿಸಿತ್ತು.

Ad Widget . Ad Widget .

ಅಕ್ರಮ ಪ್ರಕರಣದ ತನಿಖೆ ನಡೆಸಿದ ಸಿಐಡಿ ಅಧಿಕಾರಿಗಳ ತಂಡ ದೂರುದಾರರಿಂದ ಮಾಹಿತಿ ಪಡೆದುಕೊಂಡು 600ಕ್ಕೂ ಹೆಚ್ಚು ದಾಖಲೆಗಳನ್ನು ವಶಕ್ಕೆ ಪಡೆದು ಪರಿಶೀಲಿಸಿತ್ತು. ಅಕ್ರಮದ ಬಗ್ಗೆ ತನಿಖೆ ಮುಂದುವರೆಸಿದ ಸಿಐಡಿ ಇದೀಗ ಮಾಜಿ ಶಾಸಕರನ್ನು ಬಂಧಿಸಿದೆ.

Leave a Comment

Your email address will not be published. Required fields are marked *