Ad Widget .

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಂಕಿತ ಡೆಂಗ್ಯೂಗೆ ವ್ಯಕ್ತಿ ಬಲಿ

ಸಮಗ್ರ ನ್ಯೂಸ್: ರಾಜ್ಯದಾದ್ಯಂತ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿದ್ದು ಇದೀಗ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಂಕಿತ ಡೆಂಗ್ಯೂಗೆ ವ್ಯಕ್ತಿಯೊಬ್ಬರು ಶನಿವಾರ ಮೃತಪಟ್ಟಿದ್ದಾರೆ. ಇದರಿಂದ ಡೆಂಗ್ಯೂಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ಸಾವಾಗಿದೆ.

Ad Widget . Ad Widget .

ಪುತ್ತೂರು ತಾಲೂಕು ಪಡ್ನೂರಿನ ಯತೀಶ್ (50) ಮೃತರು. ಮೂಲತಃ ಬಂಟ್ವಾಳ ತಾಲೂಕಿನ ಶಂಭೂರು ನಿವಾಸಿಯಾದ ಯತೀಶ್ ಅವರಿಗೆ ಜುಲೈ 10ರಂದು ಜ್ವರ ಕಾಣಿಸಿಕೊಂಡಿತು. ವಿಪರೀತ ಜ್ವರದ ಹಿನ್ನೆಲೆಯಲ್ಲಿ ಅವರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಬಳಿಕ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅವರು ಮೃತಪಟ್ಟಿದ್ದಾರೆ. ಇದರೊಂದಿಗೆ ಕರ್ನಾಟಕದಲ್ಲಿ ಡೆಂಗ್ಯೂಗೆ ಬಲಿಯಾದವರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ.

Ad Widget . Ad Widget .

ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ‌ಪಟ್ರಮೆ ಗ್ರಾಮದಲ್ಲಿ ಜೂನ್ ನಲ್ಲಿ ವ್ಯಕ್ತಿಯೋರ್ವರು ಬಲಿಯಾಗಿದ್ದರು.

Leave a Comment

Your email address will not be published. Required fields are marked *