ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಿನಾಂಕ 15-7-2024 ರಂದು ರೆಡ್ ಅಲರ್ಟ್ ಘೋಷಣೆಯಾಗಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಅಂಗನವಾಡಿ ,ಸರಕಾರಿ ಅನುದಾನಿತ ಮತ್ತು ಖಾಸಗಿ ,ಪ್ರಾಥಮಿಕ ಪ್ರೌಢಶಾಲೆ ,ಪದವಿ ಪೂರ್ವ ಕಾಲೇಜುಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ
ಭಾರೀ ಮಳೆ ಹಿನ್ನೆಲೆ| ದ.ಕ ಜಿಲ್ಲೆಯಾದ್ಯಂತ ಶಾಲೆ, ಪಿಯು ಕಾಲೇಜುಗಳಿಗೆ ಇಂದು (ಜು.15) ರಜೆ ಘೋಷಣೆ
