Ad Widget .

ಇಂದಿನಿಂದ ವಿಧಾನ ಮಂಡಲ ಅಧಿವೇಶನ| ಸಮರ್ಪಕ ಉತ್ತರ ನೀಡಲು ಅಧಿಕಾರಿಗಳಿಗೆ ಸಿಎಂ ಸೂಚನೆ

ಸಮಗ್ರ ನ್ಯೂಸ್: ರಾಜ್ಯ ವಿಧಾನ ಮಂಡಲ ಅಧಿವೇಶನ ಇಂದು ಪ್ರಾರಂಭವಾಗಲಿದೆ. ಇದಕ್ಕೂ ಮುನ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಅಧಿಕಾರಿಗಳ ಜೊತೆ ಸಭೆ ಮಾಡಿದರು. ವಿಧಾನ ಮಂಡಲ ಅಧಿವೇಶನದಲ್ಲಿ ಚರ್ಚೆಯಾಗುವ ವಿಷಯಗಳಿಗೆ ಸಮರ್ಪಕ ಉತ್ತರ ನೀಡಲು ಸಿದ್ಧರಾಗಿರುವಂತೆ ಹಾಗೂ ಅಧಿವೇಶನದಲ್ಲಿ ಖುದ್ದು ಹಾಜರಿದ್ದು, ಸಚಿವರಿಗೆ ತಮ್ಮ ಇಲಾಖೆಗಳ ವಿಷಯಗಳ ಕುರಿತ ಮಾಹಿತಿ ಒದಗಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

Ad Widget . Ad Widget .

ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನ ಮಂಡಲ ಅಧಿವೇಶನಕ್ಕೆ ಪೂರ್ವಭಾವಿಯಾಗಿ ಎಲ್ಲ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿಗಳು/ ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳ ಸಭೆ ನಡೆಸಿ ವಿವಿಧ ವಿಷಯಗಳ ಕುರಿತು ಚರ್ಚಿಸಿದರು. ಎಲ್ಲ ಕಾರ್ಯದರ್ಶಿಗಳೂ, ಇಲಾಖಾ ಮುಖ್ಯಸ್ಥರು ಅಧಿವೇಶನದಲ್ಲಿ ಹಾಜರಿರಬೇಕು. ಸಚಿವರಿಗೆ ಸಮರ್ಪಕವಾಗಿ ಮಾಹಿತಿ ನೀಡಬೇಕು. ಆಯಾ ಇಲಾಖಾ ಸಚಿವರು ಚರ್ಚೆಯ ವಿಷಯಗಳಿಗೆ ಉತ್ತರಿಸಬೇಕು. ಅಗತ್ಯವಿದ್ದರೆ ನಾನು ಮಧ್ಯಪ್ರವೇಶಿಸುತ್ತೇನೆ ಎಂದು ತಿಳಿಸಿದರು.

Ad Widget . Ad Widget .

ನಿಮ್ಮ ಇಲಾಖೆಯ ವಿಷಯ ಇದ್ದಾಗ ಕಾರ್ಯದರ್ಶಿಗಳು ಖುದ್ದು ಹಾಜರಿದ್ದು, ಸಚಿವರಿಗೆ ಸಹಕಾರ ನೀಡಬೇಕು. ಕೇವಲ ಅಧೀನ ಅಧಿಕಾರಿಗಳನ್ನು ಕಳುಹಿಸಿ ಗೈರು ಹಾಜರಾಗುವಂತಿಲ್ಲ ಎಂದು ಸೂಚನೆ ನೀಡಿದರು. ಸಭೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್‌ ಗೋಯೆಲ್‌, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್‌ ಹಾಗೂ ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

Leave a Comment

Your email address will not be published. Required fields are marked *