Ad Widget .

ಜು.22 ರಿಂದ ರಾಜ್ಯದ 250 ಅಂಗನವಾಡಿಗಳಲ್ಲಿ LKG, UKG ಆರಂಭ – ಲಕ್ಷ್ಮೀ ಹೆಬ್ಬಾಳ್ಕರ್

ಸಮಗ್ರ ನ್ಯೂಸ್: ಕರ್ನಾಟಕದ ಅಂಗನವಾಡಿ ಕೇಂದ್ರಗಳ ಉನ್ನತೀಕರಣದ ಮೊದಲ ಭಾಗವಾಗಿ ಇದೇ 22 ರಂದು ರಾಜ್ಯದ 250 ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ( LKG, UKG ) ತರಗತಿಗಳನ್ನು ಸಾಂಕೇತಿಕವಾಗಿ ಆರಂಭಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.

Ad Widget . Ad Widget .

ಬೆಂಗಳೂರಿನ ಮಡಿವಾಳದ ಸ್ತ್ರೀ ಶಕ್ತಿ ಭವನದಲ್ಲಿ ನಡೆದ ಅಂಗನವಾಡಿ ಕೇಂದ್ರಗಳಲ್ಲೇ ಪೂರ್ವ ಪ್ರಾಥಮಿಕ ಶಿಕ್ಷಣ ಜಾರಿಯಾಗಲಿ, ಐಸಿಡಿಎಸ್ ಉಳಿಸಿ ಮಕ್ಕಳನ್ನು ರಕ್ಷಿಸಿ, ಸಂಘಟನೆ-ಸಂಘರ್ಷ-ಶಿಕ್ಷಣ ಅಧ್ಯಯನ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಸಚಿವರು, ಪೂರ್ವ ಪ್ರಾಥಮಿಕ ಶಾಲಾ ಮಕ್ಕಳಿಗೆ ಇಲಾಖೆ ವತಿಯಿಂದಲೇ ಬ್ಯಾಗ್, ಪುಸ್ತಕ ಹಾಗೂ ಸಮವಸ್ತ್ರಗಳನ್ನು ವಿತರಿಸಲಾಗುವುದು ಎಂದರು.

Ad Widget . Ad Widget .

ಮಕ್ಕಳಿಗೆ ಗುಣಮಟ್ಟದ ಶಿಕ್ಷಣವನ್ನು ಬಯಸುವುದು ಪ್ರತಿಯೊಬ್ಬ ಪಾಲಕರ ಕನಸಾಗಿರುತ್ತದೆ. ಗುಣಮಟ್ಟದ ಶಿಕ್ಷಣದ ಬಗ್ಗೆ ಶಿಕ್ಷಣ ಇಲಾಖೆ ಯೋಚಿಸುವುದು ತಪ್ಪಲ್ಲ. ಆದರೆ, ಅಂಗನವಾಡಿಗೆ ಪೆಟ್ಟು ಬೀಳಬಾರದು. ನಾವೇ ಅಂಗನವಾಡಿ ಕೇಂದ್ರಗಳ ಉನ್ನತೀಕರಣಕ್ಕೆ ಮುಂದಾಗೋಣ. ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಇಂಥ ಶಿಬಿರಗಳನ್ನು ಆಯೋಜಿಸಿ, ಗುಣಮಟ್ಟಕ್ಕೆ ಆದ್ಯತೆ ನೀಡೋಣ ಎಂದರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.

Leave a Comment

Your email address will not be published. Required fields are marked *