Ad Widget .

ಕೆಎಸ್‌ಆರ್‌ಟಿಸಿ ಪ್ರಯಾಣಿಕರಿಗೆ ಶಾಕ್.. ಟಿಕೆಟ್ ದರ ಏರಿಕೆ?

ಸಮಗ್ರ ನ್ಯೂಸ್: ರಾಜ್ಯದಲ್ಲಿ ಇತ್ತೀಚೆಗೆ ಪೆಟ್ರೋಲ್‌, ಡೀಸೆಲ್‌ ದರ ಏರಿಕೆ ಕಂಡಿತು ಇದಾದ ಬೆನ್ನಲ್ಲೇ ಈಗ ಸಾರಿಗೆ ಬಸ್‌ ಪ್ರಯಾಣಿಕರಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಶಾಕ್ ನೀಡಲು ಮುಂದಾಗಿದೆ.

Ad Widget . Ad Widget .

ಹೌದು ಬಸ್ ಟಿಕೆಟ್‌ ದರ ಏರಿಕೆ ವಿಚಾರವಾಗಿ ಕೆಎಸ್‌ಆರ್‌ಟಿಸಿ ಅಧ್ಯಕ್ಷ ಎಸ್‌.ಆರ್‌. ಶ್ರೀನಿವಾಸ್ ಸುಳಿವು ನೀಡಿದ್ದು, ಇದಕ್ಕೆ ಪ್ರಯಾಣಿಕರಿಂದ ಇದೀಗ ಆಕ್ರೋಶ ವ್ಯಕ್ತವಾಗಿದೆ. ಗುಬ್ಬಿ ತಾಲೂಕಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಕೆಎಸ್‌ಆರ್‌ಟಿಸಿ ಅಧ್ಯಕ್ಷ ಎಸ್‌.ಆರ್‌. ಶ್ರೀನಿವಾಸ್ ಅವರು, ಇಂಧನ ದರ, ವಾಹನ ಬಿಡಿ ಭಾಗಗಳ ಬೆಲೆ ಏರಿಕೆ ಹಾಗೂ ಸಿಬ್ಬಂದಿ ವೇತನ ವೆಚ್ಚದಿಂದ ಕೆಎಸ್‌ಆರ್‌ಟಿಸಿ ನಷ್ಟ ಅನುಭವಿಸುತ್ತಿದೆ. ಹೀಗಾಗಿ ನಷ್ಟ ಸರಿದೂಗಿಸಲು ಟಿಕೆಟ್‌ ದರ ಏರಿಕೆ ಅನಿವಾರ್ಯ ಎಂದು ಹೇಳುವ ಮೂಲಕ ಬಸ್‌ ಟಿಕೆಟ್‌ ದರ ಖಚಿತ ಎಂಬ ಸುಳಿವನ್ನು ನೀಡಿದ್ದಾರೆ.

Ad Widget . Ad Widget .

ಇದೇ ವಿಚಾರವಾಗಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಟಿಕೆಟ್ ದರ ಏರಿಕೆ ವಿಚಾರವಾಗಿ ಸ್ಪಷ್ಟನೆ ನೀಡಲು ನಿರಾಕರಿಸಿರುವ ರಾಮಲಿಂಗಾರೆಡ್ಡಿ ಅವರು, ದರ ಏರಿಕೆ ಬಗ್ಗೆ ಗುಬ್ಬಿ ಶ್ರೀನಿವಾಸ್‌ರನ್ನೇ ಕೇಳಿಕೊಳ್ಳಿ ಎಂದು ಹೇಳಿದ್ದಾರೆ. ಈ ಮಾತಿಂದ ಸಾರಿಗೆ ಬಸ್ ಟಿಕೆಟ್ ದರ ಏರಿಕೆ ಬಹುತೇಕ ಫಿಕ್ಸ್ ಎನ್ನಲಾಗುತ್ತಿದೆ.

Leave a Comment

Your email address will not be published. Required fields are marked *