Ad Widget .

ಉಡುಪಿಯಲ್ಲಿ ಭಾರೀ ಅಗ್ನಿ ಅವಘಡ| ಬಾರ್ ಉದ್ಯಮಿ ಸಹಿತ ಮನೆ ಭಸ್ಮ

ಸಮಗ್ರ ನ್ಯೂಸ್: ಉಡುಪಿ ಜಿಲ್ಲೆಯ ಅಂಬಲಪಾಡಿಯ ಗಾಂಧಿನಗರ ಎಂಬಲ್ಲಿ ಇಂದು ಸೋಮವಾರ ಬೆಳಗಿನ ಜಾವ ನಡೆದ ಭಾಗಿ ಅಗ್ನಿ ಅವಘಡದಲ್ಲಿ ಮನೆಯೊಂದು ಸಂಪೂರ್ಣ ಸುಟ್ಟು ಹೋಗಿದ್ದು ಮನೆ ಮಾಲಿಕ ಬಾರ್ ಉದ್ಯಮಿ ಮೃತಪಟ್ಟಿದ್ದಾರೆ. ಆತನ ಅವರ ಪತ್ನಿ ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

Ad Widget . Ad Widget .

ಅಂಬಲಪಾಡಿಯ ಬಾರ್ ಉದ್ಯಮಿ ರಮಾನಂದ ಶೆಟ್ಟಿ ಮೃತರು. ಅವರ ಪತ್ನಿ ಅಶ್ವಿನಿ ಶೆಟ್ಟಿ ಗಂಭೀರವಾಗಿ ಗಾಯಗೊಂಡು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಅವಘಡಕ್ಕೆ ಕಾರಣ ಎಂದು ಶಂಕಿಸಲಾಗಿದೆ. ಮನೆಮಂದಿ ಮಲಗಿದ್ದ ವೇಳೆ ಮನೆಯಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು ಇದರ ಪರಿಣಾಮ ಇನ್ವರ್ಟರ್ ಸೇರಿದಂತೆ ಹಲವಾರು ಸೊತ್ತುಗಳು ಸುಟ್ಟು ಹೋಗಿವೆ.

Ad Widget . Ad Widget .

ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ದಂಪತಿ ತೀವ್ರವಾಗಿ ಗಾಯಗೊಂಡಿದ್ದರು . ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಉಡುಪಿ ಅಗ್ನಿಶಾಮಕ ದಳದ ತಂಡ ಕೂಡಲೇ ಕಾರ್ಯಾಚರಣೆ ನಡೆಸಿ ನಾಲ್ವರನ್ನು ರಕ್ಷಿಸಿದ್ದಾರೆಂದು ತಿಳಿದು ಬಂದಿದೆ. ಗಂಭೀರ ಸ್ಥಿತಿಯಲ್ಲಿದ್ದ ದಂಪತಿಯನ್ನು ಕೂಡಲೇ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೇ ರಮಾನಂದ ಶೆಟ್ಟಿ ಆಸ್ಪತ್ರೆಯಲ್ಲಿ ಮತ ಪಟ್ಟರೆಂದು ಮೂಲಗಳು ತಿಳಿಸಿವೆ.

Leave a Comment

Your email address will not be published. Required fields are marked *