ಬೆಳ್ತಂಗಡಿ: ವಿದ್ಯುತ್ ಶಾಕ್ ಗೆ ಯುವಕ‌ ಬಲಿ

ಸಮಗ್ರ ನ್ಯೂಸ್: ವಿದ್ಯುತ್ ಶಾಕ್ ಹೊಡೆದ ಪರಿಣಾಮ ಯುವಕನೊಬ್ಬ ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ಇಳಂತಿಲ ಗ್ರಾಮದಲ್ಲಿ ಜು.15ರ ಸೋಮವಾರ ನಡೆದಿದೆ.

Ad Widget ... ..

ಇಳಂತಿಲ ಗ್ರಾಮದ ಗೋಳಿದಡಿ ತಿಮ್ಮಪ್ಪಗೌಡ ಎಂಬವರ ಪುತ್ರ ಹರೀಶ್ ಗೌಡ(35) ಎಂಬಾತ ಸಾವನ್ನಪ್ಪಿದ ಯುವಕ. ತಮ್ಮ ಮನೆಯ ಸಮೀಪವೇ ವಿದ್ಯುತ್ ಆಘಾತಕ್ಕೆ ಒಳಗಾಗಿದ್ದು ಇವರನ್ನು ಕೂಡಲೇ ಆಸ್ಪತ್ರೆಗೆ ಕೊಂಡೊಯ್ದರೂ ಆ ವೇಳೆಗಾಗಲೇ ಅವರು ಮೃತಪಟ್ಟಿದ್ದರು ಎನ್ನಲಾಗಿದೆ.

Ad Widget

ಪೊಲೀಸರು ಹಾಗೂ ಮೆಸ್ಕಾಂ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಈ ದುರ್ಘಟನೆಯಿಂದ ತಾಲೂಕಿನಲ್ಲಿ ಈ ಮಳೆ‌ಗಾಲ ವಿದ್ಯುತ್ ಗೆ ಮತ್ತೊಂದು ಬಲಿ ಬಿದ್ದಂತಾಗಿದೆ.

Leave a Comment

Your email address will not be published. Required fields are marked *