ಕರಾವಳಿಯಲ್ಲಿ ಮುಂದುವರಿದ ವರ್ಷಧಾರೆ| ದ.ಕ ಜಿಲ್ಲೆಯಲ್ಲಿ ನಾಳೆ(ಜು.16) ಕೂಡಾ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಮುಂದುವರಿಕೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ‌ ಮುಂದುವರೆದಿದೆ. ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿದ್ದು ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಿನಾಂಕ 16-7-2024 ರಂದು ರೆಡ್ ಅಲರ್ಟ್ ಘೋಷಣೆಯಾಗಿದೆ.

Ad Widget ... ..

ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಅಂಗನವಾಡಿ , ಸರಕಾರಿ ಅನುದಾನಿತ ಮತ್ತು ಖಾಸಗಿ ,ಪ್ರಾಥಮಿಕ ಪ್ರೌಢಶಾಲೆ , ಪದವಿ ಪೂರ್ವ ಕಾಲೇಜುಗಳಿಗೆ ಜು.16ರಂದು ರಜೆಯನ್ನು ಮುಂದುವರೆಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.

Ad Widget

ಮಳೆ‌ ಕಾರಣದಿಂದ ತಗ್ಗುಪ್ರದೇಶಗಳು ಜಲಾವೃತವಾಗಿದ್ದು, ಹಲವೆಡೆ ದುರ್ಘಟನೆಗಳು ಸಂಭವಿಸಿದೆ. ಕುಕ್ಕೆಯಲ್ಲಿ ಸ್ನಾನ ಘಟ್ಟ ಮುಳುಗಡೆಯಾಗಿದ್ದು, ಬೆಳ್ತಂಗಡಿ ತಾಲೂಕಿನ ಇಳಂತಿಲದಲ್ಲಿ ವಿದ್ಯುತ್ ಶಾಕ್ ಗೆ ಯುವಕ ಸಾವನ್ನಪ್ಪಿದ್ದಾನೆ.

Leave a Comment

Your email address will not be published. Required fields are marked *