Ad Widget .

ಅಂಕೋಲಾ: ರಾ.ಹೆದ್ದಾರಿಯಲ್ಲಿ ಗುಡ್ಡ ಕುಸಿತ ಪ್ರಕರಣ| 7 ಮಂದಿ ದುರ್ಮರಣ

ಸಮಗ್ರ ನ್ಯೂಸ್: ಉತ್ತರ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದ ಅಂಕೋಲಾ ತಾಲೂಕಿನ ಶಿರೂರು ಬಳಿಯ ಹೆದ್ದಾರಿಯಲ್ಲಿ ಗುಡ್ಡ ಕುಸಿದು ಏಳು ಜನ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

Ad Widget . Ad Widget .

ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಎನ್​ಡಿಆರ್​ಎಫ್ ಸಿಬ್ಬಂದಿ ಧಾವಿಸಿದ್ದು, ಕಾರ್ಯಾಚರಣೆ ಪ್ರಗತಿಯಲ್ಲಿದೆ. ಘಟನೆಗೆ ಸಂಬಂಧಿಸಿದಂತೆ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮಾತನಾಡಿ, ಗುಡ್ಡ ಕುಸಿದು 7 ಜನ ಮೃತಪಟ್ಟಿರುವುದಾಗಿ ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ. ಮಣ್ಣಿನಡಿ ಸಿಲುಕಿರುವವರ ರಕ್ಷಿಸಲು ಸೂಚನೆ ನೀಡಿದ್ದೇನೆ. ಎನ್​ಆರ್​ಎಫ್ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ ಎಂದು ಹೇಳಿದರು.

Ad Widget . Ad Widget .

Leave a Comment

Your email address will not be published. Required fields are marked *