Ad Widget .

ಸುಳ್ಯದ ವಿದ್ಯಾಮಾತಾ ಅಕಾಡೆಮಿಯಲ್ಲಿ ಉಚಿತ ಕಂಪ್ಯೂಟರ್ ತರಗತಿಗೆ ಅರ್ಜಿ ಆಹ್ವಾನ

ಸಮಗ್ರ ನ್ಯೂಸ್: ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾಗಿರುವ ವಿದ್ಯಾಮಾತಾ ಅಕಾಡೆಮಿಯು ಸದ್ಯ PUC ಮತ್ತು Degree ಓದುತ್ತಿರುವ ವಿದ್ಯಾರ್ಥಿಗಳಿಗೆ 3 ತಿಂಗಳು ಪ್ರತೀ ಭಾನುವಾರ ಉಚಿತ ಕಂಪ್ಯೂಟರ್ ತರಬೇತಿಯನ್ನು ನೀಡಲಿದ್ದು, ಈ ಸಂಬಂಧ ಅರ್ಜಿ ಆಹ್ವಾನಿಸಿದೆ. ಕಂಪ್ಯೂಟರ್ ತರಬೇತಿಯನ್ನು ಪಡೆಯುವ ಪ್ರತೀ ವಿದ್ಯಾರ್ಥಿಗಳಿಗೆ ಕಂಪ್ಯೂಟರ್ ತರಬೇತಿಯ ಪ್ರಮಾಣ ಪತ್ರವನ್ನು ನೀಡಲಾಗುತ್ತದೆ.

Ad Widget . Ad Widget .

ಆಸಕ್ತ ವಿದ್ಯಾರ್ಥಿಗಳು ತಮ್ಮ ಆಧಾರ್ ಕಾರ್ಡ್ ಜೆರಾಕ್ಸ್ ಮತ್ತು 2 ಪಾಸ್ ಪೋರ್ಟ್ ಅಳತೆಯ ಫೋಟೋದೊಂದಿಗೆ ವಿದ್ಯಾಮಾತಾ ಅಕಾಡೆಮಿಯ ಸುಳ್ಯ ಶಾಖಾ ಕಚೇರಿಯನ್ನು ಸಂಪರ್ಕಿಸಿ ಹೆಸರನ್ನು ನೋಂದಾಯಿಸಿಕೊಳ್ಳಬಹುದಾಗಿದೆ.

Ad Widget . Ad Widget .

ನೋಂದಾವಣೆಗಾಗಿ ಸೋಮವಾರದಿಂದ ಭಾನುವಾರ ಬೆಳಿಗ್ಗೆ 9 ರಿಂದ ಸಾಯಂಕಾಲ 3 ರ ವರೆಗೆ ಸಂಸ್ಥೆಯ ಈ ಕೆಳಗಿನ ವಿಳಾಸವನ್ನು ಸಂಪರ್ಕಿಸಿ. ವಿದ್ಯಾಮಾತಾ ಅಕಾಡೆಮಿ, ಸುಳ್ಯ ಶಾಖೆ:
ಟಿ.ಎ.ಪಿ.ಸಿ.ಎಂ.ಎಸ್ ಬಿಲ್ಡಿಂಗ್ ಕಾರ್ ಸ್ಟ್ರೀಟ್ ಸುಳ್ಯ ದ.ಕ 574239
PH: 9448527606 / 9148935808

Leave a Comment

Your email address will not be published. Required fields are marked *