ಸಮಗ್ರ ನ್ಯೂಸ್: ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿ 275ರ ಮಡಿಕೇರಿಯ ಜೋಡುಪಾಲ ಸಮೀಪ ಜು.16ರಂದು ಮುಖ್ಯರಸ್ತೆಯಲ್ಲಿ ಬಿರುಕು ಕಾಣಿಸಿಕೊಂಡಿದೆ. ಇದರಿಂದಾಗಿ ರಸ್ತೆ ಬದಿಯ ಗುಡ್ಡ ಕುಸಿಯುವ ಭೀತಿ ಎದುರಾಗಿದ್ದು, ಹೆದ್ದಾರಿ ಸಂಪರ್ಕ ಕಡಿತದ ಭೀತಿಯೂ ಎದುರಾಗಿದೆ.
ಕಳೆದ ಎರಡು ಮೂರು ದಿನಗಳಿಂದ ಕೊಡಗು ಭಾಗದಲ್ಲಿ ಸುರಿಯುತ್ತಿರುವ ನಿರಂತರ ಮಳೆಗೆ ಜೋಡುಪಾಲ ಸಮೀಪ ಎರಡನೇ ಮೊಣ್ಣಂಗೇರಿ ಬಳಿ ಹೆದ್ದಾರಿಯ ಒಂದು ಬದಿಯಲ್ಲಿ ಬಿರುಕು ಕಾಣಿಸಿಕೊಂಡಿದ್ದು, ವಾಹನ ಸವಾರರು ಎಚ್ಚರ ವಹಿಸುವಂತೆ ಸೂಚಿಸಲಾಗಿರುವುದಾಗಿ ತಿಳಿದುಬಂದಿದೆ.
ಸುಮಾರು 6 ವರ್ಷಗಳ ಹಿಂದೆ ಇದೆ ಪರಿಸರದಲ್ಲಿ ಗುಡ್ಡ ಕುಸಿದು ಜಲಪ್ರಳಯ ಸಂಭವಿಸಿ ಹೆದ್ದಾರಿ ಸಂಪೂರ್ಣ ಬಂದ್ ಆಗಿತ್ತು. ಅಲ್ಲದೆ ಅಪಾರ ಪ್ರಮಾಣದ ಸಾವು ನೋವು ಸಂಭವಿಸಿತ್ತು.