ಮಸ್ಕತ್ ನ ಶಿಯಾ ಮಸೀದಿ ಬಳಿ ಗುಂಡಿನ ದಾಳಿ| ಓರ್ವ ಭಾರತೀಯ ಸಹಿತ 9 ಮಂದಿ‌ ಸಾವು

ಸಮಗ್ರ ನ್ಯೂಸ್: ಒಮಾನ್ ರಾಜಧಾನಿ ಮಸ್ಕತ್ನ ಶಿಯಾ ಮಸೀದಿಯ ಬಳಿ ಸಾಮೂಹಿಕ ಗುಂಡಿನ ದಾಳಿಯಲ್ಲಿ ಒಬ್ಬ ಭಾರತೀಯ ಸಾವನ್ನಪ್ಪಿದ್ದಾರೆ ಎಂದು ಒಮಾನ್ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಸಾಮಾಜಿಕ ಮಾಧ್ಯಮ ಪೋಸ್ಟ್ನಲ್ಲಿ ತಿಳಿಸಿದೆ.

Ad Widget ... ..

ಒಮಾನ್’ನ ಶಿಯಾ ಮುಸ್ಲಿಂ ಮಸೀದಿಯ ಮೇಲೆ ಸೋಮವಾರ ತಡರಾತ್ರಿ ನಡೆದ ದಾಳಿಯಲ್ಲಿ ಮೂವರು ದಾಳಿಕೋರರು ಸೇರಿದಂತೆ ಒಂಬತ್ತು ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Ad Widget

ಗುಂಡಿನ ದಾಳಿಯಲ್ಲಿ ಮೃತಪಟ್ಟವರಲ್ಲಿ ನಾಲ್ವರು ಪಾಕಿಸ್ತಾನಿ ಪ್ರಜೆಗಳು ಮತ್ತು ಒಬ್ಬ ಪೊಲೀಸ್ ಸೇರಿದ್ದಾರೆ ಎಂದು ಪಾಕಿಸ್ತಾನ ಮತ್ತು ಒಮಾನ್ ಅಧಿಕಾರಿಗಳು ತಿಳಿಸಿದ್ದಾರೆ. ಭದ್ರತಾ ಸಿಬ್ಬಂದಿ ಸೇರಿದಂತೆ ವಿವಿಧ ರಾಷ್ಟ್ರಗಳ 28 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Leave a Comment

Your email address will not be published. Required fields are marked *