Ad Widget .

ಉಡುಪಿ ಅಗ್ನಿ ಅವಘಡ ಪ್ರಕರಣ| ಉದ್ಯಮಿ ಪತ್ನಿ ಸೋಶಿಯಲ್ ಮೀಡಿಯಾ ಖ್ಯಾತಿಯ ಅಶ್ವಿನಿ ಶೆಟ್ಟಿ ಸಾವು

ಸಮಗ್ರ ನ್ಯೂಸ್: ಉಡುಪಿಯ ಅಂಬಲಪಾಡಿಯಲ್ಲಿ ಸೋಮವಾರ ಬೆಳಗಿನ ಜಾವ ಬಾರ್ & ರೆಸ್ಟೋರೆಂಟ್ ಉದ್ಯಮಿ ಮನೆಯಲ್ಲಿ ನಡೆದ ಬೆಂಕಿ ಅವಘಡದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಪತ್ನಿ ಅಶ್ವಿನಿ ಅವರು ಚಿಕಿತ್ಸೆ ಫಲಕಾರಿಯಾಗದೆ ಮಣಿಪಾಲದ ಆಸ್ಪತ್ರೆಯಲ್ಲಿ ಮಂಗಳವಾರ ಮೃತಪಟ್ಟಿದ್ದಾರೆ.

Ad Widget . Ad Widget .

ಸೋಮವಾರ ನಗರದ ಅಂಬಲಪಾಡಿಯ ಶೆಟ್ಟಿ ಬಾರ್ & ರೆಸ್ಟೋರೆಂಟ್ನ ಮಾಲಕರ ಮನೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಬೆಂಕಿಯ ಕೆನ್ನಾಲಿಗೆ ಸಿಲುಕಿದ ಬಾರ್ ಮಾಲಕ ರಮಾನಂದ ಹಾಗು ಪತ್ನಿ ಗಂಭೀರ ಗಾಯಗೊಂಡಿದ್ದು ಅವರನ್ನು ಮಣಿಪಾಲದ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ರಮಾನಂದ ಅವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದರು.

Ad Widget . Ad Widget .

ಬೆಂಕಿ ಅವಘಡದ ವೇಳೆ ಹೊಗೆಯಿಂದ ತೀವ್ರವಾಗಿ ಅಸ್ವಸ್ಥಗೊಂಡಿದ್ದ ಪತ್ನಿ ಅಶ್ವಿನಿ ಕೂಡ ಮಂಗಳವಾರ ಮಧ್ಯಾಹ್ನದ ವೇಳೆಗೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಘಟನೆಯಲ್ಲಿ ಮಕ್ಕಳಿಬ್ಬರು ಮನೆಯ ಮೇಲಿನ ಮಹಡಿಯಲ್ಲಿದ್ದ ಪರಿಣಾಮ ಅಪಾಯದಿಂದ ಪಾರಾಗಿದ್ದು, ಘಟನೆಯಿಂದ ಮನೆ ಸುಟ್ಟು ಕರಕಲಾಗಿದೆ.

Leave a Comment

Your email address will not be published. Required fields are marked *