ಪಂಚೆ ಹಾಕೊಂಡು ಬಂದ ರೈತ.. ಮಾಲ್ ಒಳಗೆ ಬಿಡದೆ ಸಿಬ್ಬಂದಿಯ ದರ್ಪ

ಸಮಗ್ರ ನ್ಯೂಸ್: ಬೆಂಗಳೂರಿನ ಮಾಲ್ ಒಂದರಲ್ಲಿ ಸಿಬ್ಬಂದಿಯೋರ್ವ ದರ್ಪ ತೋರಿದ ಘಟನೆ ಬೆಳಕಿಗೆ ಬಂದಿದೆ. ಪಂಚೆ ಹಾಕೊಂಡು ಬಂದಿದ್ದಕ್ಕೆ ರೈತನನ್ನು ಜಿಟಿ ಮಾಲ್ ಒಳಗೆ ಬಿಡದೆ ಸಿಬ್ಬಂದಿ ದರ್ಪ ತೋರಿದ್ದಾನೆ.

Ad Widget ... ..

ಹಾವೇರಿ ಮೂಲದ ನಾಗರಾಜ್ ಎನ್ನುವರು (ಜುಲೈ 16)ರಂದು ತಮ್ಮ ತಂದೆ ತಾಯಿಗೆ ಸಿನಿಮಾ ತೋರಿಸಲು ಬೆಂಗಳೂರಿನ ಮಾಗಡಿ ರಸ್ತೆಯಲ್ಲಿ ಇರುವ ಜಿಟಿ ಮಾಲ್ ಗೆ ಕರೆದೊಯ್ದಿದ್ದಾರೆ. ಆದ್ರೆ, ನಾಗರಾಜ್ ತಮ್ಮ ತಂದೆ ಪಂಚೆ ಹಾಕಿಕೊಂಡು ತಲೆಗೆ ಪಟಗ ಸುತ್ತಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಬ್ಬಂದಿ ಅವರನ್ನು ಮಾಲ್ ಒಳಗೆ ಪ್ರವೇಶಿಸಲು ನಿರಾಕರಿಸಿದ್ದಾರೆ. ಪುತ್ರ ನಾಗರಾಜ್ ಎಂಬುವರು ಒಳಗೆ ಬಿಡಿ ಎಂದು ಇಷ್ಟು ಬಾರಿ ಕೇಳಿದರು ಪಂಚೆ ಹಾಕೊಂಡಿದ್ದಾರೆ. ಮಾಲ್ ನಲ್ಲಿ ಪಂಚೆ ಹಾಕಿದವರನ್ನು ಬಿಡುವುದಿಲ್ಲ ಎಂದು ಸಿಬ್ಬಂದಿ ವಾದಿಸಿದ್ದಾರೆ.

Ad Widget

ಅಷ್ಟೇ ಅಲ್ಲದೇ ನಮ್ಮ ಮಾಲಿನಲ್ಲಿ ಈ ರೀತಿ ರೂಲ್ಸ್ ಇದೆ ಎಂದು ಪ್ರವೇಶ ದ್ವಾರದಲ್ಲಿ ಅರ್ಧ ಗಂಟೆಗೂ ಹೆಚ್ಚು ಕಾಲ ಮಾಲ್ ಮುಂದೆ ಕೂರಿಸಿದ್ದಾರೆ. ಇದೀಗ ಈ ವಿಡಿಯೋ ವೈರಲ್ ಆಗಿದೆ ಎಲ್ಲೇಡೆ ಆಕ್ರೋಶಕ್ಕೆ ಕಾರಣವಾಗಿದೆ.

Leave a Comment

Your email address will not be published. Required fields are marked *