Ad Widget .

ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಆದ್ಯತೆ| ಸಿಎಂ ಮೊದಲು ಟ್ವೀಟ್, ಆಮೇಲೆ ಡಿಲಿಟ್| ಮತ್ತೆ ಸಿಎಂ ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಹೇಳಿದ್ದೇನು? ಇಲ್ಲಿದೆ ಸಂಪೂರ್ಣ ಮಾಹಿತಿ…

ಸಮಗ್ರ ನ್ಯೂಸ್: ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಖಾಸಗಿ ವಲಯದಲ್ಲಿಯೂ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಕಲ್ಪಿಸುವಂತ ಮಹತ್ವದ ಮಸೂಧೆ ಒಪ್ಪಿಗೆ ಸೂಚಿಸಲಾಗಿತ್ತು. ಈ ಮಾಹಿತಿ ಹಂಚಿಕೊಂಡು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದ ಸಿಎಂ ಸಿದ್ಧರಾಮಯ್ಯ, ಆ ಬಳಿಕ ಡಿಲಿಟ್ ಮಾಡಿದ್ದರು.

Ad Widget . Ad Widget .

ಈ ಕುರಿತಂತೆ ಮತ್ತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, ಅದರಲ್ಲಿ ರಾಜ್ಯದ ಖಾಸಗಿ ಕೈಗಾರಿಕೆಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಆಡಳಿತಾತ್ಮಕ ಹುದ್ದೆಗಳಿಗೆ ಶೇ.50 ಹಾಗೂ ಆಡಳಿತಾತ್ಮಕವಲ್ಲದ ಹುದ್ದೆಗಳಿಗೆ ಶೇ.75 ಮೀಸಲಾತಿ ನಿಗದಿಪಡಿಸುವ ವಿಧೇಯಕಕ್ಕೆ ಸೋಮವಾರ ನಡೆದ ಸಚಿವ ಸಂಪುಟ ಸಭೆಯು ಒಪ್ಪಿಗೆ ನೀಡಿದೆ ಅಂತ ತಿಳಿಸಿದ್ದಾರೆ.

Ad Widget . Ad Widget .

ಕನ್ನಡಿಗರು ಕನ್ನಡದ ನೆಲದಲ್ಲಿ ಉದ್ಯೋಗ ವಂಚಿತರಾಗುವುದನ್ನು ತಪ್ಪಿಸಿ, ತಾಯ್ನಾಡಿನಲ್ಲಿ ನೆಮ್ಮದಿಯ ಬದುಕು ಕಟ್ಟಿಕೊಳ್ಳಲು ಅವಕಾಶ ಕಲ್ಪಿಸಬೇಕು ಎಂಬುದು ನಮ್ಮ ಸರ್ಕಾರದ ಆಶಯ. ನಮ್ಮದು ಕನ್ನಡಪರವಾದ ಸರ್ಕಾರ. ಕನ್ನಡಿಗರ ಹಿತ ಕಾಯುವುದು ನಮ್ಮ ಆದ್ಯತೆಯಾಗಿದೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ.

Leave a Comment

Your email address will not be published. Required fields are marked *