Ad Widget .

ಕರಾವಳಿಯಲ್ಲಿ ಮುಂದುವರಿದ ವರ್ಷಧಾರೆ| ಇಂದು(ಜು.18) ದ.ಕ ಜಿಲ್ಲೆಯ 5 ತಾಲೂಕುಗಳ ಅಂಗನವಾಡಿ ಶಾಲೆ, ಪಿಯು ಕಾಲೇಜುಗಳಿಗೆ ರಜೆ

ಸಮಗ್ರ ನ್ಯೂಸ್: ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಿಂದ ಅನೇಕ ಅವಾಂತರಗಳು ಸೃಷ್ಟಿಯಾಗಿದ್ದು, ಜನ ಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ದ.ಕ ಜಿಲ್ಲೆಯಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ನಾಳೆಯೂ ವ್ಯಾಪಕ ಮಳೆ ಸಾಧ್ಯತೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ೫ ತಾಲೂಕಿನ ಎಲ್ಲಾ ಶಾಲಾ-ಕಾಲೇಜುಗಳು ಸೇರಿದಂತೆ ಅಂಗನವಾಡಿಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಆದೇಶಿಸಿದ್ದಾರೆ.

Ad Widget . Ad Widget .

ದಕ್ಷಿಣ ಕನ್ನಡ ಜಿಲ್ಲೆಯ (ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ, ಕಡಬ ತಾಲೂಕುಗಳಿಗೆ) ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ & ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, (12ನೇ ತರಗತಿವರೆಗೆ) ದಿನಾಂಕ: 18-07-2024 ರಂದು ರಜೆ ಘೋಷಿಸಲಾಗಿದೆ.

Ad Widget . Ad Widget .

ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದು, ಮುಂದಿನ ದಿನಗಳಲ್ಲಿ ರಜಾ ದಿನಗಳನ್ನು ಭರ್ತಿಗೊಳಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.

Leave a Comment

Your email address will not be published. Required fields are marked *