Ad Widget .

ದ.ಕ ಜಿಲ್ಲೆಯಲ್ಲಿ ಮಳೆಯ ಕಾರಣಕ್ಕೆ ರಜೆ ಎಂಬ ನಕಲಿ ಸುತ್ತೋಲೆ ಹಂಚಿಕೆ| ಕಾನೂನು ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಆದೇಶ

ಸಮಗ್ರ ನ್ಯೂಸ್: ಮಳೆಯ ಕಾರಣಕ್ಕಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಆದೇಶ ಪ್ರತಿ ರವಾನಿಸುವವರ ವಿರುದ್ಧ ಎಫ್‌ಐಆರ್ ದಾಖಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಚ್ಚರಿಕೆ ನೀಡಿದ್ದಾರೆ.

Ad Widget . Ad Widget .

ಜು.18ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆಯನ್ನು ಜಿಲ್ಲಾಡಳಿತ ಮಾಡಿಲ್ಲ. ಆದರೆ ಪ್ರತಿದಿನವೂ ಜಿಲ್ಲಾಧಿಕಾರಿ ರಜೆ ಘೋಷಣೆ ಮಾಡುವುದಕ್ಕಿಂತ ಮುಂಚಿತವಾಗಿ ಸಾಮಾಜಿಕ ಜಾಲಾತಾಣಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಎಂದು ಡಿಸಿ ಅವರ ನಕಲಿ ಆದೇಶ ಪ್ರತಿ ರವಾನೆಯಾಗುತ್ತದೆ. ಇದರಿಂದ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಗೊಂದಲಕ್ಕೆ ಒಳಗಾಗುತ್ತಿದ್ದಾರೆ. ಇಂತಹ ಚಟುವಟಿಕೆಗಳನ್ನು ತಡೆಯಲು ರಜೆಯ ಬಗ್ಗೆ ಸುಳ್ಳು ಸುದ್ದಿಯನ್ನು ಹರಡುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವ ಬಗ್ಗೆ ಎಚ್ಚರಿಕೆ ನೀಡಿರುವುದಾಗಿ ಜಿಲ್ಲಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Ad Widget . Ad Widget .

Leave a Comment

Your email address will not be published. Required fields are marked *