ಸಮಗ್ರ ನ್ಯೂಸ್: ಭಾರೀ ಮಳೆ ಪ್ರಭಾವದಿಂದ ಶಿರಾಡಿ ಘಾಟ್ ನಲ್ಲಿ ಗುಡ್ಡ ಕುಸಿತ ಉಂಟಾಗಿದ್ದು, ಈ ನಿಟ್ಟಿನಲ್ಲಿ ಸಕಲೇಶಪುರ, ಹಾಸನ, ಬೆಂಗಳೂರು ತೆರಳುವ ವಾಹನಗಳು ಬದಲಿ ರಸ್ತೆಯಲ್ಲಿ ಚಲಿಸುವಂತೆ ಮಾಣಿಯಲ್ಲಿ ಬ್ಯಾರಿಕೇಡ್ ಅಳವಡಿಸುವ ಮೂಲಕ ಪೊಲೀಸರು ಮಾಹಿತಿ ನೀಡುತ್ತಿದ್ದಾರೆ.
ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಮಾಣಿಯಲ್ಲಿ ಬ್ಯಾರಿಕೇಡ್ ಅಳವಡಿಸಿದ್ದು, ಬೆಂಗಳೂರು ಸೇರಿದಂತೆ ಸಕಲೇಶಪುರ, ಹಾಸನ ತೆರಳುವ ವಾಹನಗಳು ಬದಲಿ ರಸ್ತೆಗಳಾದ ಮಡಿಕೇರಿ, ಮೈಸೂರು ಮಾರ್ಗವಾಗಿ ತೆರಳುವಂತೆ ಅಧಿಕಾರಿಗಳು ತಿಳಿಸಿದ್ದಾರೆ.

ಹಾಸನ ಭಾಗದಿಂದ ಬರುವ ಪ್ರಯಾಣಿಕರು ಚಾರ್ಮಾಡಿ ಘಾಟ್ ರಸ್ತೆ ಬಳಸಿ ಉಜಿರೆ ಮೂಲಕ ಮಂಗಳೂರು ಪ್ರಯಾಣಿಸಬಹುದು. ಅಥವಾ ಮಡಿಕೇರಿ ಬಳಸಿ ಸಂಪಾಜೆ ಘಾಟ್ ರಸ್ತೆ ಮೂಲಕ ಪ್ರಯಾಣ ಮುಂದುವರೆಸಬಹುದು. ಘಟ್ಟಪ್ರದೇಶದಲ್ಲಿ ಭಾರೀ ಮಳೆ ಪರಿಣಾಮ ಗುಡ್ಡ ಕುಸಿತ ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ವೃಥಾ ಪ್ರಯಾಣವನ್ನು ತಾತ್ಕಾಲಿಕವಾಗಿ ನಿಲ್ಲಿಸುವುದು ಬೆಟರ್.