ಕೇರಳದಲ್ಲಿ ಭಾರೀ ಮಳೆ ಹಿನ್ನೆಲೆ| ಕಾಸರಗೋಡು ಜಿಲ್ಲೆಯ ಶಾಲೆ, ಮದರಸಾಗಳಿಗೆ ಜು.19ರಂದು ರಜೆ ಘೋಷಣೆ

ಸಮಗ್ರ ನ್ಯೂಸ್: ಕಾಸರಗೋಡು ಜಿಲ್ಲೆಯಲ್ಲಿ ಜು.19ರಂದು ರೆಡ್ ಅಲರ್ಟ್ ಘೋಷಿಸಲಾಗಿದೆ. ಜಿಲ್ಲೆಯಲ್ಲಿ ಭಾರೀ ಮಳೆಯ ಹಿನ್ನೆಲೆಯಲ್ಲಿ ಕಾಸರಗೋಡು ಜಿಲ್ಲೆಯ ಶಾಲೆ, ಮದ್ರಸಗಳಿಗೆ ಜು.19ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಕೆ. ಇಂಪಾ ಶೇಖರ್ ಆದೇಶ ನೀಡಿದ್ದಾರೆ.

Ad Widget ... ..

ರಾಜ್ಯ, ಸಿ ಬಿ ಎಸ್ ಇ, ಐ ಸಿ ಎಸ್ ಇ ಶಾಲೆಗಳು, ಕೇಂದ್ರೀಯ ವಿದ್ಯಾಲಯ, ಅಂಗನವಾಡಿ, ಮದ್ರಸಗಳಿಗೂ ರಜೆ ಅನ್ವಯವಾಗಲಿದೆ. ಕಾಲೇಜುಗಳಿಗೆ ರಜೆ ಇಲ್ಲ. ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಿಂದ ಭಾರೀ ಗಾಳಿ, ಮಳೆ ಸುರಿಯುತ್ತಿದೆ. ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಹಲವೆಡೆ ಪ್ರವಾಹ ಸ್ಥಿತಿ ಉಂಟಾಗಿದೆ. ಭಾರೀ ಗಾಳಿ – ಮಳೆಗೆ ವಿದ್ಯುತ್ ಸಂಪರ್ಕ ಅಸ್ತವ್ಯಸ್ತಗೊಂಡಿದೆ. ಪೂರ್ವ ನಿರ್ಧರಿತ ಪರೀಕ್ಷೆಗಳಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಜಿಲ್ಲಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Ad Widget

Leave a Comment

Your email address will not be published. Required fields are marked *