ಮುಂದುವರಿದ ಭಾರೀ ಮಳೆ| ಜು.19ರಂದು ದಕ್ಷಿಣ ಕನ್ನಡದ 5 ತಾಲೂಕಿನ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ದ.ಕ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಜು.18 ರಂದು ಹವಾಮಾನ ಇಲಾಖೆ ರೆಡ್‌ ಅಲರ್ಟ್‌ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಜು. 19ರಂದು ಜಿಲ್ಲೆಯ ಸುಳ್ಯ, ಪುತ್ತೂರು, ಕಡಬ, ಬಂಟ್ವಾಳ, ಬೆಳ್ತಂಗಡಿ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ ಹಾಗೂ ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ‌‌ ಮುಗಿಲನ್ ಆದೇಶಿಸಿದ್ದಾರೆ.

Ad Widget ... ..

ಜಿಲ್ಲೆಯಲ್ಲಿ ನೇತ್ರಾವತಿ, ಕುಮಾರಧಾರ ನದಿಗಳು ಉಕ್ಕಿ ಹರಿಯುತ್ತಿದ್ದು, ಹಲವೆಡೆ ತಗ್ಗುಪ್ರದೇಶಗಳು ಜಲಾವೃತಗೊಂಡಿವೆ. ಅಲ್ಲಲ್ಲಿ ವಿಪತ್ತು ಸಂಭವಿಸಿದ್ದು ಜಿಲ್ಲಾಡಳಿತ ಸಕ್ರಿಯವಾಗಿ ಕಾರ್ಯಾಚರಣೆ ನಡೆಸುತ್ತಿದೆ. ಶಿರಾಡಿ, ಸಂಪಾಜೆ, ಚಾರ್ಮಾಡಿ ಘಾಟ್ ನಲ್ಲಿ ಕುಸಿತ ಸಂಭವಿಸಿದೆ.

Ad Widget

Leave a Comment

Your email address will not be published. Required fields are marked *