ಸಮಗ್ರ ನ್ಯೂಸ್: ಮಾದಕ ವಸ್ತುಗಳ ನಿಗ್ರಹಕ್ಕೆಂದೇ ಕೇಂದ್ರ ಸರ್ಕಾರ ಆರಂಭಿಸಿರುವ ಪ್ರತ್ಯೇಕ ಸಹಾಯವಾಣಿ ‘1933’ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಗುರುವಾರ ಚಾಲನೆ ನೀಡಿದರು. ಈ ಸಹಾಯವಾಣಿ ಸಂಖ್ಯೆ ದಿನದ 24 ಗಂಟೆಯೂ ಕಾರ್ಯನಿರ್ವಹಿಸಲಿದೆ.
ಯಾವುದೇ ವ್ಯಕ್ತಿಯು ಮಾದಕ ವಸ್ತುಗಳಿಗೆ ಸಂಬಂಧಿಸಿದ ದೂರು, ಸಲಹೆ ಹಾಗೂ ಮಾಹಿತಿಗಳನ್ನು ಇದರಲ್ಲಿ ಹಂಚಿಕೊಳ್ಳಬಹುದಾಗಿದೆ. ಅಲ್ಲದೇ ಇದಕ್ಕೆ ಕರೆ ಮಾಡಿದವರ ಮಾಹಿತಿಯನ್ನು ಗುಪ್ತವಾಗಿ ಇಡಲಾಗುತ್ತದೆ.
ಇದರೊಂದಿಗೆ [email protected] ಇ-ಮೇಲ್ ವಿಳಾಸ ಹಾಗೂ ncbmanas.gov.in ವೆಬ್‌ಸೈಟ್‌ಗಳನ್ನು ಉದ್ಘಾಟಿಸಿದರು. ಸಾರ್ವಜನಿಕರು ಇದರಲ್ಲಿ ಯಾವುದಕ್ಕಾದರೂ ಮಾದಕ ವಸ್ತು ಮಾರಾಟ, ಖರೀದಿ, ಸರಬರಾಜು ಇತ್ಯಾದಿ ದೂರುಗಳನ್ನು ಕಳುಹಿಸಬಹುದಾಗಿದೆ ಎಂದು ಮೂಲಗಳು ತಿಳಿಸಿವೆ.