ಹಳಿಯ ಮೇಲೆ‌ ಕುಳಿತು ಮದ್ಯ ಸೇವನೆ| ರೈಲು ಹರಿದು ಮೂವರು ಸಾವು

ಸಮಗ್ರ ನ್ಯೂಸ್: ಹಳಿಯ ಮೇಲೆ ಕುಳಿತು ಮದ್ಯ ಸೇವನೆ ಮಾಡುತ್ತಿದ್ದ ವೇಳೆ ರೈಲು ಹರಿದ ಪರಿಣಾಮ ಮೂವರು ಯುವಕರು ಮೃತಪಟ್ಟ ಘಟನೆ ಗಂಗಾವತಿಯ ಕನಕಗಿರಿ ರಸ್ತೆಯ ರೈಲ್ವೆ ಮಾರ್ಗದಲ್ಲಿ ಗುರುವಾರ ರಾತ್ರಿ ಸಂಭವಿಸಿರುವುದು ವರದಿಯಾಗಿದೆ.

Ad Widget ... ..

ಮೃತರನ್ನು ಗಂಗಾವತಿಯ ಮೌನೇಶ್ (23), ಸುನೀಲ್ ಕುಮಾರ್(23) ಹಾಗೂ ವೆಂಕಟ್ (20) ಎಂದು ಗುರುತಿಸಲಾಗಿದೆ. ಈ ಮೂವರು ಗುರುವಾರ ರಾತ್ರಿ 9 ಗಂಟೆ ಸುಮಾರಿಗೆ ಕನಕಗಿರಿ ರಸ್ತೆಯಲ್ಲಿರುವ ರೈಲು ಹಳಿ ಮೇಲೆ ಕುಳಿತು ಮದ್ಯ ಸೇವನೆ ಮಾಡುತ್ತಿದ್ದರು ಎನ್ನಲಾಗಿದೆ. ಇದೇ ವೇಳೆ ಹುಬ್ಬಳ್ಳಿಯಿಂದ ಸಿಂಧನೂರಿಗೆ ತೆರಳುವ ರೈಲು ಮೂವರ ಮೇಲೆಯೇ ಹರಿದಿದ್ದು ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

Ad Widget

ಸ್ಥಳದಲ್ಲಿ ಮದ್ಯದ ಬಾಟಲಿ, ಮೊಬೈಲ್ ಫೋನ್ ಗಳು ಹಾಗೂ ಕೆಲವು ತಿಂಡಿ ಪಾಕೆಟ್ ಗಳು ಪತ್ತೆಯಾಗಿವೆ. ಸ್ಥಳಕ್ಕೆ ರೈಲ್ವೆ ಪೊಲೀಸ್ ತಂಡ ಭೇಟಿ ನೀಡಿ ದೂರು ದಾಖಲಿಸಿಕೊಂಡು ತನಿಖೆ ನಡೆಸಿದೆ.

Leave a Comment

Your email address will not be published. Required fields are marked *