ರೆಡ್ ಅಲರ್ಟ್, ಭಾರೀ ಮಳೆ‌ ಹಿನ್ನೆಲೆ| ಜು.20ರಂದು ಉಡುಪಿ ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ಉಡುಪಿ ಜಿಲ್ಲೆಯಾದ್ಯಂತ ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆ ರೆಡ್‌ ಅಲರ್ಟ್‌ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಜು. 20ರಂದು ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ ಹಾಗೂ ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಆದೇಶಿಸಿದ್ದಾರೆ.

Ad Widget ... ..

ಜಿಲ್ಲೆಯಲ್ಲಿ ನದಿಗಳು ಉಕ್ಕಿ ಹರಿಯುತ್ತಿದ್ದು, ಹಲವೆಡೆ ತಗ್ಗುಪ್ರದೇಶಗಳು ಜಲಾವೃತಗೊಂಡಿವೆ. ಅಲ್ಲಲ್ಲಿ ವಿಪತ್ತು ಸಂಭವಿಸಿದ್ದು ಜಿಲ್ಲಾಡಳಿತ ಸಕ್ರಿಯವಾಗಿ ಕಾರ್ಯಾಚರಣೆ ನಡೆಸುತ್ತಿದೆ.

Ad Widget

Leave a Comment

Your email address will not be published. Required fields are marked *