Ad Widget .

ಭಾರಿ ಮಳೆ, ಗುಡ್ಡ ಕುಸಿತ ಭೀತಿ| ಜು.20ರಂದು ಉ.ಕನ್ನಡ ಜಿಲ್ಲೆಯ 10 ತಾಲೂಕಿನ ಶಾಲೆ,ಪಿ.ಯು ಕಾಲೇಜುಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ಉತ್ತರಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಗುಡ್ಡಕುಸಿತ ಪ್ರಕರಣ ಹೆಚ್ಚುತ್ತಲೇ ಇದೆ. ಅಲ್ಲದೆ, ನದಿಗಳು ಅಪಾಯದ‌‌ ಮಟ್ಟ ಮೀರಿ ಹರಿಯುತ್ತಿವೆ.

Ad Widget . Ad Widget .

ಹೀಗಾಗಿ ಮುನ್ನೆಚ್ಚರಿಕಾ‌ ಕ್ರಮವಾಗಿ ಶಾಲಾ ಕಾಲೇಜು ಗಳಿಗೆ ನಾಳೆ ಜುಲೈ 20 ರಂದು ಹೊನ್ನಾವರ, ಕುಮಟಾ, ಭಟ್ಕಳ, ಅಂಕೋಲಾ, ಕಾರವಾರ, ಶಿರಸಿ, ಸಿದ್ದಾಪುರ, ಹಳಿಯಾಳ, ದಾಂಡೇಲಿ, ಯಲ್ಲಾಪುರ , ಜೋಯಿಡಾ ತಾಲೂಕಿನ ಎಲ್ಲಾ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಜಿಲ್ಲಾಧಿಕಾರಿಗಳು ರಜೆ ಘೋಷಣೆ ಮಾಡಿದ್ದಾರೆ.

Ad Widget . Ad Widget .

ಜಿಲ್ಲೆಯ ಅಲ್ಲಲ್ಲಿ ಗುಡ್ಡ ಕುಸಿತ ಸಂಭವಿಸುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಹಲವೆಡೆ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದ್ದು, ವಿಪತ್ತು ನಿರ್ವಹಣಾ ತಂಡಗಳು ಸತತವಾಗಿ‌ ಕಾರ್ಯಾಚರಿಸುತ್ತಿವೆ.

Leave a Comment

Your email address will not be published. Required fields are marked *