ವಿವಿಧ ವೃತ್ತಿಪರ ಕೋರ್ಸ್ ಗಳ ಶುಲ್ಕ 10% ಏರಿಕೆ| ರಾಜ್ಯ ಸರ್ಕಾರದಿಂದ ವಿದ್ಯಾರ್ಥಿಗಳಿಗೂ ಶಾಕ್!

ಸಮಗ್ರ ನ್ಯೂಸ್: ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್‌ಗಳ ಶುಲ್ಕವನ್ನು ಶೇ 10 ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಪರಿಷ್ಕೃತ ಶುಲ್ಕ 2024-25ನೇ ಶೈಕ್ಷಣಿಕ ಸಾಲಿನಿಂದಲೇ ಅನ್ವಯವಾಗಲಿದೆ.

. Ad Widget . Ad Widget

ಉನ್ನತ ಶಿಕ್ಷಣ ಸಚಿವ ಎಂ.ಸಿ. ಸುಧಾಕರ್, ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ ಪಾಟೀಲ ನೇತೃತ್ವದಲ್ಲಿ ವಿವಿಧ ವೃತ್ತಿಪರ ಶಿಕ್ಷಣ ಸಂಸ್ಥೆಗಳ ಪ್ರತಿನಿಧಿಗಳ ಜತೆ ಜೂನ್‌ 14ರಂದು ನಡೆದಿದ್ದ ಸಭೆಯಲ್ಲಿ ಶೇ 10ರಷ್ಟು ಹೆಚ್ಚಳ ಮಾಡಲು ಒಮ್ಮತದ ನಿರ್ಧಾರ ತೆಗೆದುಕೊಳ್ಳಲಾಗಿತ್ತು.

. Ad Widget . . Ad Widget . Ad Widget

ವಾಸ್ತುಶಿಲ್ಪ ಶಾಸ್ತ್ರ ಕೋರ್ಸ್‌ಗೆ ಪ್ರವೇಶ ಪಡೆಯುವವರಿಗೆ ₹42,116 ಶುಲ್ಕ ನಿಗದಿ ಮಾಡಲಾಗಿದೆ. ಖಾಸಗಿ ಎಂಜಿನಿಯರಿಂಗ್‌ ಕಾಲೇಜುಗಳು ಪ್ರತಿ ವಿದ್ಯಾರ್ಥಿಯಿಂದ ಇತರೆ ಶುಲ್ಕವಾಗಿ ವಾರ್ಷಿಕ ಗರಿಷ್ಠ ₹20 ಸಾವಿರ ಪಡೆಯಲು ಅವಕಾಶ ಕಲ್ಪಿಸಲಾಗಿದೆ.

Leave a Comment

Your email address will not be published. Required fields are marked *