Ad Widget .

ಶಿರೂರು ಗುಡ್ಡ ಪ್ರಕರಣ| ‘ ನೀವ್ ಹೇಳ್ದಂಗೆ ಕೇಳೋಕೆ ಆಗಲ್ಲ’| ಐಆರ್ ಬಿ ಅಧಿಕಾರಿಗಳಿಗೆ ಸಿಎಂ ಕ್ಲಾಸ್

ಸಮಗ್ರ ನ್ಯೂಸ್: ಸಿಎಂ ಸಿದ್ದರಾಮಯ್ಯ ಐಆರ್‌ಬಿಗೆ ಅಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಂಡ ಘಟನೆ ಭಾನುವಾರ ನಗರದಲ್ಲಿ ನಡೆದಿದೆ. ಕಾರವಾರ ನಗರದ ಸಿಇಒ ಕಚೇರಿಯ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಐಆರ್‌ಬಿ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸಖತ್‌ ಕ್ಲಾಸ್ ತೆಗೆದುಕೊಂಡಿದ್ದಾರೆ.

Ad Widget . Ad Widget .

ಜಿಲ್ಲೆಯಲ್ಲಿ ರಾಷ್ಟ್ರಿಯ ಹೆದ್ದಾರಿ ಕಾಮಗಾರಿ ಪೂರ್ಣಗೊಳಿಸದೇ ಟೋಲ್ ಸಂಗ್ರಹ ಸರಿಯಿಲ್ಲ. 2016ಕ್ಕೆ ಮುಕ್ತಾಯವಾಗಬೇಕಿದ್ರೂ ಈವರೆಗೂ ಮುಕ್ತಾಯಗೊಳಿಸಿಲ್ಲ. ಈ ಕಾಮಗಾರಿ ಬಗ್ಗೆ ಕೇಂದ್ರ ಸಚಿವರಿಗೂ ಮಿಸ್ ಲೀಡಿಂಗ್ ಮಾಡುತ್ತಿದ್ದೀರಿ. ರಾಜ್ಯ ಸರ್ಕಾರಕ್ಕೂ ತಪ್ಪು ಮಾಹಿತಿ ನೀಡುತ್ತಿದ್ದೀರಿ. ನೀವು ಹೇಳಿದ ಹಾಗೆ ಕೇಳುವುದಕ್ಕೆ ನಾವಿಲ್ಲ. ಈ ಬಗ್ಗೆ ಕೇಂದ್ರ ಹೆದ್ದಾರಿ ಸಚಿವರಿಗೆ ತೀಕ್ಷ್ಣ ಪತ್ರ ಬರೆಯುವುದಾಗಿ ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

Ad Widget . Ad Widget .

ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂದಿನ ದಿನಗಳಲ್ಲಿ ಇನ್ನೂ ಕೂಡ ಮಳೆಯಾಗುವ ಸಾಧ್ಯತೆಗಳಿವೆ. ಗುಡ್ಡ ಕುಸಿತ ಸೇರಿದಂತೆ ಯಾವುದೇ ರೀತಿಯ ಅಪಾಯವಾಗದಂತೆ ಜಿಲ್ಲಾಡಳಿತದಿಂದ ಎಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಅಪಾಯಕಾರಿ ಪ್ರದೇಶಗಳ ಗ್ರಾಮಗಳಲ್ಲಿ ಗ್ರಾಮಮಟ್ಟದ ಟಾಸ್ಕ್ ಫೋರ್ಸ್ ಸಮಿತಿಗಳನ್ನು ರಚಿಸಿ ಅಲ್ಲಿನ ಪರಿಸ್ಥಿತಿಯ ಕುರಿತು ಜಿಲ್ಲಾಡಳಿತಕ್ಕೆ ಮಾಹಿತಿ ನೀಡಬೇಕು. ಜಿಲ್ಲೆಯ ಎಲ್ಲಾ ಅಧಿಕಾರಿಗಳು ಸಾರ್ವಜನಿಕ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಬೇಕು. ಈ ಮೂಲಕ ಜನರಿಗೆ ಅಧಿಕಾರಿಗಳ ಮೇಲೆ ವಿಶ್ವಾಸ ಮೂಡುವಂತೆ ಕೆಲಸ ನಿರ್ವಹಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರುನ ಸೂಚನೆ ನೀಡಿದ್ದಾರೆ.

Leave a Comment

Your email address will not be published. Required fields are marked *