Ad Widget .

ಮಾಜಿ ಸಚಿವ ಬಿ.ನಾಗೇಂದ್ರಗೆ 14 ದಿನ ನ್ಯಾಯಾಂಗ ಬಂಧನ

ಸಮಗ್ರ ನ್ಯೂಸ್: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ನಾಗೇಂದ್ರ ಅವರ ಇಡಿ (ED) ಕಸ್ಟಡಿ ಇಂದು ಅಂತ್ಯವಾಗಿದು, ಮಾಜಿ ಸಚಿವ ಬಿ. ನಾಗೇಂದ್ರಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶ ಹೊರಡಿಸಿದೆ. ಇಡಿ ಅಧಿಕಾರಿಗಳು ಕಸ್ಟಡಿಗೆ ಕೇಳದ ಹಿನ್ನೆಲೆಯಲ್ಲಿ ಬಿ. ನಾಗೇಂದ್ರ ಅವರಿಗೆ ಆಗಸ್ಟ್ 3ರವರೆಗೆ ಅಂದರೇ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶಿಸಿದೆ.

Ad Widget . Ad Widget .

ವಾಲ್ಮೀಕಿ ಹಗರಣದಲ್ಲಿ ನಾಗೇಂದ್ರ ಅವರ ಪಾತ್ರ ಕಂಡುಬಂದ ಹಿನ್ನೆಲೆ ಇಡಿ ಅಧಿಕಾರಿಗಳು ನಾಗೇಂದ್ರ ಅವರನ್ನು ಬಂಧಿಸಿ 11 ದಿನಗಳ ಕಾಲ ತನಿಖೆ ನಡೆಸಿದ್ದಾರೆ. ನಾಗೇಂದ್ರ ಅವರನ್ನು ಆರಂಭದಲ್ಲಿ 6 ದಿನ ಕಸ್ಟಡಿಗೆ ಪಡೆದಿದ್ದ ಅಧಿಕಾರಿಗಳು ತನಿಖೆಗೆ ಸಹಕರಿಸುತ್ತಿಲ್ಲ ಎಂಬ ಕಾರಣ ನೀಡಿ ಮತ್ತೆ ಕಸ್ಟಡಿಗೆ ಕೇಳಿದ್ದರು. ಈ ಹಿನ್ನೆಲೆ ನ್ಯಾಯಾಲಯ ನಾಗೇಂದ್ರ ಅವರನ್ನು ಎರಡನೇ ಬಾರಿಗೆ 5 ದಿನ ಇಡಿ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿತ್ತು. ಇಂದು ನಾಗೇಂದ್ರ ಕಸ್ಟಡಿ ಅಂತ್ಯವಾದ ಹಿನ್ನೆಲೆ ಇಡಿ ಅಧಿಕಾರಿಗಳು ನಾಗೇಂದ್ರ ಅವರನ್ನು ಜನಪ್ರತಿನಿಧಿಗಳ ಕೋರ್ಟ್ ಮುಂದೆ ಹಾಜರುಪಡಿಸಿದರು. ಇದೀಗ 14 ದಿನ ನ್ಯಾಯಾಂಗ ಬಂಧನ ವಿಧಿಸಿದೆ.

Ad Widget . Ad Widget .

Leave a Comment

Your email address will not be published. Required fields are marked *