ಸಮಗ್ರ ನ್ಯೂಸ್: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೈಲುಪಾಲಾಗಿದ್ದ ವಿಧಾನಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರಿಗೆ ಸೋಮವಾರ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಸೂರಜ್ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ನಡೆಸಿತು. ಈ ಬಳಿಕ ವಾದ, ಪ್ರತಿವಾದವನ್ನು ಆಲಿಸಿದ ನ್ಯಾಯಾಲಯವು ಸೂರಜ್ ರೇವಣ್ಣ ಅವರಿಗೆ ಜಾಮೀನು ಮಂಜೂರು ಮಾಡಿದೆ.
ಎಂಎಲ್ಸಿ ಸೂರಜ್ ರೇವಣ್ಣ ವಿರುದ್ಧ ಹಾಸನದ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ ಸಂಬಂಧ ಎರಡು ಪ್ರಕರಣಗಳು ದಾಖಲಾಗಿದ್ದವು. ಈ ಪ್ರಕರಣದಲ್ಲಿ ಜಾಮೀನು ನೀಡುವಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅವರಿಗೆ ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.