Ad Widget .

ಕೇರಳದಲ್ಲಿ ನಿಫಾ ವೈರಸ್ ಆರ್ಭಟ| ಹಲವು ಜಿಲ್ಲೆಗಳಲ್ಲಿ ಕಟ್ಟೆಚ್ಚರ, ಲಾಕ್ ಡೌನ್ ಹೇರಿಕೆ

ಸಮಗ್ರ ನ್ಯೂಸ್: ದೇವರನಾಡು ಕೇರಳದಲ್ಲಿ ನಿಫಾ ವೈರಸ್‌ ಸೋಂಕು ಆರ್ಭಟಿಸುತ್ತಿದೆ. ನಿಫಾ ವೈರಸ್ ಸೋಂಕಿಗೆ ತುತ್ತಾಗಿದ್ದ ಕೇರಳದ ಮಲಪ್ಪುರಂ ಜಿಲ್ಲೆಯ 14 ವರ್ಷದ ಬಾಲಕ ಭಾನುವಾರ ಕೋಝಿಕ್ಕೋಡ್‌ನಲ್ಲಿ ಸಾವನ್ನಪ್ಪಿದ್ದಾನೆ. ಜೊತೆಗೆ ನಿಫಾ ಸೋಂಕಿತ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಕೇರಳದಲ್ಲಿ ಹಲವು ನಿರ್ಬಂಧಗಳನ್ನು ಹೇರಲಾಗಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಮಲಪ್ಪುರಂನ ಬಾಲಕನ ಸಾವಿನ ಬೆನ್ನಲ್ಲೇ ಪುಣೆಯ ರಾಷ್ಟ್ರೀಯ ವೈರಾಲಜಿ ಸಂಸ್ಥೆಯು ಫಾ ಸೋಂಕು ಸಾವಿಗೆ ಕಾರಣ ಅನ್ನೋದನ್ನು ಪತ್ತೆ ಹಚ್ಚಿದೆ. ನಿಫಾ ಸೋಂಕಿನಿಂದ ಸಾವನ್ನಪ್ಪಿರುವ ಬಾಲಕನ ಅಂತ್ಯಕ್ರಿಯೆಯನ್ನು ಸರಕಾರದ ಮಾರ್ಗಸೂಚಿಯಂತೆಯೇ ನಡೆಸಲಾಗಿದೆ. ಬಾಲಕ ಮಾತ್ರವಲ್ಲದೇ ಇನ್ನೂ ನಾಲ್ವರಲ್ಲಿ ನಿಫಾ ಸೋಂಕಿನ ಲಕ್ಷಣಗಳು ಪತ್ತೆಯಾಗಿದೆ. ಓರ್ವರನ್ನು ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸಯನ್ನು ಕೊಡಿಸಲಾಗುತ್ತಿದೆ ಎಂದು ಆರೋಗ್ಯ ಸಚಿವೆ ವೀಣಾ ಜಾರ್ಜ್‌ ಮಾಹಿತಿ ನೀಡಿದ್ದಾರೆ.

Ad Widget . Ad Widget . Ad Widget .

ನಿಫಾ ಸೋಂಕು ದೃಢಪಟ್ಟ ಬೆನ್ನಲ್ಲೇ ಮಲಪ್ಪುರಂನಲ್ಲಿ ಆರೋಗ್ಯ ಇಲಾಖೆ ಕಂಟ್ರೋಲ್ ರೂಂ ಆರಂಭಿಸಿದ್ದು, ಹೈ ಅಲರ್ಟ್ ಘೋಷಿಸಿದೆ. ಜನರು ಕಡ್ಡಾಯವಾಗಿ ಮಾಸ್ಕ್‌ ಧರಿಸುವಂತೆ ಸೂಚನೆಯನ್ನು ನೀಡಲಾಗಿದೆ. ಇನ್ನು ಬಾಲಕನ ನಿವಾಸ ಇರುವ ಪಂಡಿಕ್ಕಾಡ್‌ ಪಂಚಾಯತ್‌ ವ್ಯಾಪ್ತಿಯಲ್ಲಿ ಲಾಕ್ಡೌನ್‌ ಹೇರಿಕೆ ಮಾಡಿ ಜಿಲ್ಲಾಧಿಕಾರಿ ವಿಆರ್‌ ವಿನೋದ್‌ ಆದೇಶ ಹೊರಡಿಸಿದ್ದಾರೆ. ಅಲ್ಲದೇ ಪಂಡಿಕ್ಕಾಡ್‌ ಮತ್ತು ಅನಕ್ಕಯಂ ಪಂಚಾಯತ್‌ ವ್ಯಾಪ್ತಿಯಲ್ಲಿ ನಿರ್ಬಂಧ ಹೇರಿದ್ದು, ಶಿಕ್ಷಣ ಸಂಸ್ಥೆಗಳನ್ನು ಮುಚ್ಚಲಾಗಿದೆ.

ಸಭೆ, ಸಮಾರಂಭಗಳಲ್ಲಿ ಪಾಲ್ಗೊಳ್ಳದಂತೆ ಜನರಿಗೆ ಸೂಚಿಸಲಾಗಿದ್ದು, ಈಗಾಗಲೇ ನಿಗದಿ ಆಗಿರುವ ಮದುವೆ, ಸಮಾರಂಭಗಳಿಗೆ ಕನಿಷ್ಠ ಸಂಖ್ಯೆಯಲ್ಲಿ ಜನರು ಪಾಳ್ಗೊಳ್ಳಬೇಕೆಂದು ನಿರ್ಬಂಧ ಹೇರಲಾಗಿದೆ. ಪ್ರಕರಣ ಏರಿಕೆಯಾದ್ರೆ ಇನ್ನಷ್ಟು ಪ್ರದೇಶಗಳಿಗೆ ಲಾಕ್‌ಡೌನ್‌ ಹೇರಿಕೆ ಮಾಡುವ ಸಾಧ್ಯತೆಯೂ ಇದೆ.

Leave a Comment

Your email address will not be published. Required fields are marked *