ಕನಕಪುರ: ಮಹಿಳೆಯರು ಸೇರಿದಂತೆ ಏಳು ಜನರ ಮೇಲೆ‌ ಮಾರಕಾಸ್ತ್ರಗಳಿಂದ ಹಲ್ಲೆ

ಸಮಗ್ರ ನ್ಯೂಸ್: ಮಾರಕಾಸ್ತ್ರಗಳಿಂದ ಮಹಿಳೆಯರು ಸೇರಿದಂತೆ‌ 7 ಜನರ ಮೇಲೆ ಹಲ್ಲೆ ನಡೆದಿರುವ ಘಟನೆ ಜಿಲ್ಲೆಯ ಕನಕಪುರ ತಾಲೂಕಿನ ಮಾಳಗಾಳು ಗ್ರಾಮದ ಎನ್.ಕೆ.ಕಾಲೋನಿಯಲ್ಲಿ ನಡೆದಿದೆ. ಗಡಿಪಾರು ರೌಡಿಶೀಟರ್ ಹರ್ಷ ಗ್ಯಾಂಗ್​ನಿಂದ ಕೃತ್ಯ ಆರೋಪ ಮಾಡಲಾಗಿದೆ. ದಾರಿಗೆ ಅಡ್ಡವಾಗಿ ನಿಂತಿದ್ದಕ್ಕೆ 2 ಗುಂಪುಗಳ ನಡುವೆ ಗಲಾಟೆ ನಡೆದಿದೆ. ಘಟನೆ ಸಂಬಂಧ ಕೆಲವರನ್ನ ವಶಕ್ಕೆ ಪಡೆಯಲಾಗಿದ್ದು, ಕನಕಪುರ ಟೌನ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

Ad Widget ... ..

ಗಲಾಟೆಯಲ್ಲಿ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷನ ಕೈ ಕಟ್ ಆಗಿದೆ. ಘಟನಾ ಸ್ಥಳಕ್ಕೆ ರಾಮನಗರ ಎಸ್​ಪಿ ಕಾರ್ತಿಕ್ ರೆಡ್ಡಿ ಭೇಟಿ ಪರಿಶೀಲನೆ ಮಾಡಿದ್ದಾರೆ. ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಲು ಡಿಸಿಗೆ ಮನವಿ ಮಾಡಲಾಗಿದೆ. ಸಿಕ್ಕ ಸಿಕ್ಕವರ ಮೇಲೆ ಹಲ್ಲೆ ನಡೆದ ಕಾರಣ ಇಡಿ ಬಡಾವಣೆಯಲ್ಲಿ ಆತಂಕ ಶುರುವಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಸ್ಥಳದಲ್ಲಿ ಪೊಲೀಸ್ ಭದ್ರತೆ ಒದಗಿಸಲಾಗಿದೆ.

Ad Widget

Leave a Comment

Your email address will not be published. Required fields are marked *