Ad Widget .

ರೀಲ್ಸ್ ಮಾಡೋ ಪೊಲೀಸರಿಗೆ ಬಿಸಿ ಮುಟ್ಟಿಸಿದ ಇಲಾಖೆ| ಖಾಕಿಯಲ್ಲಿ ರೀಲ್ಸ್ ಮಾಡಿದರೆ ಶಿಸ್ತು ಕ್ರಮ – ಕಮಿಷನರ್

ಸಮಗ್ರ ನ್ಯೂಸ್: ಸಮವಸ್ತ್ರದಲ್ಲಿ ರೀಲ್ಸ್ ಮಾಡುವ ಪೊಲೀಸರಿಗೆ ಬೆಂಗಳೂರು ನಗರ ಕಮಿಷನರ್ ಬಿ.ದಯಾನಂದ ಅವರು ಬಿಸಿ ಮುಟ್ಟಿಸಿದ್ದಾರೆ. ಸಮವಸ್ತ್ರದಲ್ಲಿ ರೀಲ್ಸ್ ಮಾಡುವ ಪೊಲೀಸರಿಗೆ ಶಿಸ್ತು ಕ್ರಮದ ಎಚ್ಚರಿಕೆ ನೀಡಿರುವ ಅವರು, ಇಲಾಖೆಗೆ ಸಂಬಂಧಪಡದೇ ಇರುವ ವಿಷಯಗಳು ಇಲಾಖೆಯ ಘನತೆ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತವೆ. ಪೊಲೀಸ್ ಸಮವಸ್ತ್ರವು ಪೊಲೀಸರ ಬದ್ಧತೆ, ಸಮರ್ಪಣೆ ಮತ್ತು ಹೊಣೆಗಾರಿಕೆಯ ಸಂಕೇತವಾಗಿದೆ. ಡಿಜಿಟಲ್ ಫೋರಮ್​​ನಲ್ಲಿ ಇದರ ಬಳಕೆಯು ಈ ಮೌಲ್ಯಗಳನ್ನು ಪ್ರತಿಬಿಂಬಿಸುವಂತಿರಬೇಕಾಗುತ್ತದೆ. ಹಾಗಾಗಿ ಸಮವಸ್ತ್ರದಲ್ಲಿ ರೀಲ್ಸ್ ಮಾಡುವವರಿಗೆ ಶಿಸ್ತು ಕ್ರಮದ ಎಚ್ಚರಿಕೆ ನೀಡಲಾಗಿದೆ.

Ad Widget . Ad Widget .

ಈ ಬಗ್ಗೆ ಪ್ರತಿಕ್ರಿಯಿಸಿರುವ ಪೊಲೀಸ್ ಆಯುಕ್ತ ಬಿ. ದಯಾನಂದ್ ಅವರು, ಇತ್ತೀಚಿನ ದಿನಗಳಲ್ಲಿ ಪೊಲೀಸ್ ಸಿಬ್ಬಂದಿ ರೀಲ್ಸ್‌ಗಳನ್ನು ಮಾಡುತ್ತಿದ್ದಾರೆ. ಇದು ಹವ್ಯಾಸ, ಚಟವೋ ಗೊತ್ತಿಲ್ಲ, ಇಂತಹವುಗಳು ಇಲಾಖೆಗೆ ಶೋಭೆ ತರುವಂತದಲ್ಲ. ಸಮವಸ್ತ್ರಕ್ಕೆ ಸಮಾಜದಲ್ಲಿ ಅದರದ್ದೇ ಆದಂತಹ ಗೌರವ ಇದೆ. ಕೆಲವರು ತಮ್ಮ ಅಪಾರವಾದ ಪ್ರತಿಭೆಯನ್ನು ತೋರಿಸುತ್ತಿದ್ದಾರೆ. ಹೀಗಾಗಿ ಸಮವಸ್ತ್ರಗಳನ್ನ ಧರಿಸಿ ಆ ರೀಲ್ಸ್ ಗಳನ್ನ ಮಾಡೋದು ಇಲಾಖೆಗೆ ಸರಿಯಾಗೋದಿಲ್ಲ. ಹೀಗಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೊ, ರೀಲ್ಸ್‌ಗಳನ್ನ ಹಾಕುವಂತಿಲ್ಲ ಎಂದು ಸೂಚಿಸಲಾಗಿದೆ ಎಂದು ತಿಳಿಸಿದರು.

Ad Widget . Ad Widget .

ಸಾಮಾಜಿಕ ಜಾಲತಾಣಗಳಲ್ಲಿ ಇಲಾಖೆ ಹಾಗೂ ಪೊಲೀಸ್ ಕರ್ತವ್ಯಗಳಿಗೆ ಸಂಬಂಧಿಸದ ಯಾವುದೇ ವಿಷಯಗಳ ಕುರಿತು ಸಮವಸ್ತ್ರದಲ್ಲಿರುವ ಫೋಟೋ, ವಿಡಿಯೊ, ರೀಲ್ಸ್‌ಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವಂತಿಲ್ಲ. ಕರ್ನಾಟಕ ರಾಜ್ಯ ನಾಗರಿಕ ಸೇವಾ ನಿಯಮ (ನಡತೆ) ಪ್ರಕಾರ ಯಾವುದೇ ಸರ್ಕಾರಿ ನೌಕರನು ಅಧಿಕೃತವಾದ ಯಾವುದೇ ದಾಖಲೆ ಅಥವಾ ಮಾಹಿತಿಯನ್ನು ಮಾದ್ಯಮಗಳು ಅಥವಾ ಸಾಮಾಜಿಕ‌ ಜಾಲತಾಣಗಳಲ್ಲಿ ಹಂಚಿಕೊಳ್ಳುವಂತಿಲ್ಲ. ಪೊಲೀಸ್ ವೃತ್ತಿಗೆ ಸಂಬಂಧ ಪಡದ ವಿಷಯಗಳ ಕುರಿತು ಪೊಲೀಸ್ ಸಮವಸ್ತ್ರದಲ್ಲಿ ಫೋಟೊಗಳು, ವಿಡಿಯೊ, ರೀಲ್ಸ್ ಇತ್ಯಾದಿಗಳನ್ನು ಹರಿಬಿಡದಂತೆ ಜಾಗೃತಗೊಳಿಸುವಂತೆ ಹಾಗೂ ಯಾವುದೆ ಲೋಪ ಕಂಡುಬಂದಲ್ಲಿ ಗಂಭೀರವಾಗಿ ಪರಿಗಣಿಸಲಾಗುವುದು ಎಂದು ಎಲ್ಲಾ ವಿಭಾಗಗಳ ಡಿಸಿಪಿಗಳಿಗೆ ಸೂಚಿಸಿದ್ದಾರೆ.

Leave a Comment

Your email address will not be published. Required fields are marked *