Ad Widget .

ಬ್ರೇಕ್ ಕೊಟ್ಟ ಮಳೆರಾಯ| ಶಿರಾಡಿ, ಸಂಪಾಜೆ ಘಾಟ್ ನಲ್ಲಿ ರಾತ್ರಿ ಸಂಚಾರ ಆರಂಭ

ಸಮಗ್ರ ನ್ಯೂಸ್: ಮುಂಗಾರು ಮಳೆ ಕೊಂಚ ಬಿಡುವು ಕೊಟ್ಟ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ- 75ರ ಶಿರಾಡಿ ಘಾಟಿ ಮಾರ್ಗದಲ್ಲಿ ವಾಹನಗಳ ಸಂಚಾರ ಪುನರಾರಂಭವಾಗಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಸಕಲೇಶಪುರ ಸಮೀಪ ದೊಡ್ಡತಪ್ಪಲು ಬಳಿ ಮತ್ತು ಶಿರಾಡಿ ಘಾಟಿಯಲ್ಲಿ ರಸ್ತೆ ಮೇಲೆ ಭೂ ಕುಸಿತ ಸಂಭವ ಹಿನ್ನೆಲೆಯಲ್ಲಿ ಸಕಲೇಶಪುರದಿಂದ ಮಂಗಳೂರು, ಧರ್ಮಸ್ಥಳದ ನಡುವೆ ರಾತ್ರಿ ವಾಹನ ಸಂಚಾರ ನಿರ್ಬಂಧಿಸಲಾಗಿತ್ತು.

Ad Widget . Ad Widget . Ad Widget .

ಆದರೆ ರವಿವಾರ ಸಂಜೆಯಿಂದ ಮಳೆ ಅಬ್ಬರ ಕಡಿಮೆಯಾಗುತ್ತ ಬಂದಿದ್ದು, ಸೋಮವಾರ ಮಳೆ ಬಿಡುವು ಕೊಟ್ಟಿರುವುದರಿಂದ ಶಿರಾಡಿ ಘಾಟಿ ಮಾರ್ಗದಲ್ಲಿ ಎಲ್ಲ ವಾಹನಗಳ ಸಂಚಾರಕ್ಕೆ ಅವಕಾಶ ನೀಡಲಾಗಿದ್ದು, ದಿನದ 24 ತಾಸು ಕೂಡ ವಾಹನ ಸಂಚಾರ ಸೋಮವಾರದಿಂದಲೇ ಆರಂಭವಾಗಿದೆ.

ಭಾರೀ ಮಳೆಗೆ ಮಣ್ಣು ಕುಸಿತ ಸಾಧ್ಯತೆ ಹಿನ್ನೆಲೆಯಲ್ಲಿ ಮುಂಜಾಗ್ರತೆ ಕ್ರಮವಾಗಿ ಸಂಪಾಜೆ-ಮಡಿಕೇರಿ ನಡುವೆ ರಾತ್ರಿ ಹೇರಲಾಗಿದ್ದ ನಿರ್ಬಂಧ ಸೋಮವಾರ ಬೆಳಗ್ಗೆ ಮುಕ್ತಾಯಗೊಂಡಿದ್ದು, ಸೋಮವಾರ ರಾತ್ರಿ ಮತ್ತೆ ಸಂಚಾರ ಪುನರಾರಂಭಗೊಂಡಿದೆ.

ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿ 275ರ ಕರ್ತೋಜಿ ಎಂಬಲ್ಲಿ ಭೂಕುಸಿತವಾಗುವ ಸಾಧ್ಯತೆ ಇದ್ದುದರಿಂದ ಮುಂಜಾಗ್ರತೆ ಕ್ರಮವಾಗಿ ಜು. 19ರಿಂದ ಜು. 22ರ ವರೆಗೆ ರಾತ್ರಿ 8ರಿಂದ ಬೆಳಗ್ಗೆ 6ರ ವರೆಗೆ ಎಲ್ಲ ರೀತಿಯ ವಾಹನ ಸಂಚಾರ ನಿರ್ಬಂಧಿಸಿ ಕೊಡಗು ಜಿಲ್ಲಾಧಿಕಾರಿ ಆದೇಶಿಸಿದ್ದರು. ಸೋಮವಾರ ರಾತ್ರಿ ವಾಹನ ಸಂಚಾರ ಪುನರಾರಂಭಗೊಂಡಿದೆ. ಕರ್ತೋಜಿಯಲ್ಲಿ ಮಣ್ಣು ಕುಸಿತವಾದ ಪ್ರದೇಶದಲ್ಲಿ ಮುಂಜಾಗ್ರತೆ ಮುಂದುವರಿಸಲಾಗಿದ್ದು, ಪೊಲೀಸ್‌ ನಿಯೋಜಿಸಲಾಗಿತ್ತು.

Leave a Comment

Your email address will not be published. Required fields are marked *