Ad Widget .

ಬೆಂಗಳೂರು: ಪಿಜಿಯೊಂದರಲ್ಲಿ ಯುವತಿಯ ಕತ್ತು ಕೊಯ್ದು ಬರ್ಬರ ಕೊಲೆ

ಸಮಗ್ರ ನ್ಯೂಸ್: ಬೆಂಗಳೂರಿನ ಕೋರಮಂಗಲದ ವಿಆರ್ ಲೇಔಟ್ ನ ಪಿಜಿಯೊಂದರಲ್ಲಿ ಯುವತಿಯ ಕತ್ತು ಕೊಯ್ದು ಬರ್ಬರ ಕೊಲೆ ಮಾಡಲಾಗಿದೆ. ಬಿಹಾರ ಮೂಲದ ಕೃತಿ ಕುಮಾರಿ‌(24) ಕೊಲೆಯಾದ ಯುವತಿ. ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಕೃತಿ ಕುಮಾರಿ‌ಯನ್ನು ರಾತ್ರಿ ಸುಮಾರು 11.10 ರಿಂದ 11.30ರ ನಡುವೆ ಕೊಲೆ ಮಾಡಲಾಗಿದೆ.

Ad Widget . Ad Widget .

ನಿನ್ನೆ ರಾತ್ರಿ ಯುವಕನೋರ್ವ ಚಾಕು ಹಿಡಿದುಕೊಂಡು ಯುವತಿ ಇದ್ದ ಲೇಡಿಸ್ ಪಿಜಿಯೊಳಗೆ ನುಗ್ಗಿದ್ದು 3ನೇ ಮಹಡಿಯಲ್ಲಿರುವ ಕೊಠಡಿ ಬಳಿ ಚಾಕುವಿನಿಂದ ಹಲ್ಲೆ ಮಾಡಿದ್ದಾನೆ. ಕೃತಿ ಕುಮಾರಿ‌ ಕತ್ತು ಕೊಯ್ದು ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ಪರಿಚಯಸ್ಥ ಯುವಕನಿಂದಲೇ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ. ಪಿಜಿ ಮಾಲೀಕರ ನಿರ್ಲಕ್ಷ್ಯವೇ ಘಟನೆಗೆ ಪ್ರಮುಖ ಕಾರಣ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಕೋರಮಂಗಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳಕ್ಕೆ ಆಗ್ನೇಯ ವಿಭಾಗ ಡಿಸಿಪಿ ಸಾರಾ ಫಾತಿಮಾ ಭೇಟಿ ನೀಡಿದ್ದಾರೆ. ಸಿಸಿಟಿವಿ ದೃಶ್ಯ ಆಧರಿಸಿ ಆರೋಪಿ ಯುವಕನ ಪತ್ತೆ ಕಾರ್ಯ ನಡೆಯುತ್ತಿದೆ. ಕೋರಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Ad Widget . Ad Widget .

Leave a Comment

Your email address will not be published. Required fields are marked *