Ad Widget .

ಕೇಂದ್ರ ಬಜೆಟ್ ನಲ್ಲಿ ಕರ್ನಾಟಕಕ್ಕೆ ಏನು ಇಲ್ಲ: ನೀತಿ ಆಯೋಗದ ಸಭೆ ಬಹಿಷ್ಕರಿಸಲು ಸಿಎಂ ಸಿದ್ದರಾಮಯ್ಯ ನಿರ್ಧಾರ…!

ಸಮಗ್ರ ನ್ಯೂಸ್: ನಿನ್ನೆ 2024-25ನೇ ಸಾಲಿನ ಕೇಂದ್ರ ಬಜೆಟ್ ನಡೆದಿದ್ದು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡಿಸಿದ್ದಾರೆ. ಇದರಲ್ಲಿ ಕರ್ನಾಟಕಕ್ಕೆ ಯಾವುದೇ ಘೋಷಣೆ ಮಾಡಿಲ್ಲ. ಮೂಲಸೌಕರ್ಯ, ಕೈಗಾರಿಕೆ, ಕೃಷಿ, ನೀರಾವರಿ ಸೇರಿದಂತೆ ಅನೇಕ ವಲಯಗಳ ನಿರೀಕ್ಷೆಯಿತ್ತು. ಆದರೆ ಅದೆಲ್ಲಾ ಹುಸಿಯಾಗಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೋದಿ ಸರ್ಕಾರದ ವಿರುದ್ಧ ಆಕ್ರೋಶಗೊಂಡಿದ್ದು, ಮೋದಿ ನೇತೃತ್ವದಲ್ಲಿ ನಡೆಯಲಿರುವ ನೀತಿ ಆಯೋಗದ ಸಭೆಯನ್ನು ಬಹಿಷ್ಕರಿಸಲು ನಿರ್ಧರಿಸಿದ್ದಾರೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ರಾಜ್ಯದ ಸಂಸದರೆಲ್ಲರ ಸಭೆ ಕರೆದು ರಾಜ್ಯದ ಅತ್ಯವಶ್ಯಕ ಬೇಡಿಕೆಗಳನ್ನು ಮುಂದಿಟ್ಟು ಮನವರಿಕೆ ಮಾಡಿಕೊಟ್ಟಿದ್ದರೂ ಇಂದು (ಜುಲೈ 23) ಮಂಡಿಸಲಾಗಿರುವ ಕೇಂದ್ರ ಸರ್ಕಾರದ ಬಜೆಟ್ ನಲ್ಲಿ ಕರ್ನಾಟಕವನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ. ಅಲ್ಲದೇ ಕೇಂದ್ರ ಸರ್ಕಾರದ ಈ ಉದ್ದೇಶಪೂರ್ವ ನಿರ್ಲಕ್ಷ್ಯ ಮತ್ತು ತಾರತಮ್ಯ ನೀತಿಯನ್ನು ಖಂಡಿಸಿ, ಇದೇ ಜುಲೈ ತಿಂಗಳ 27ರಂದು ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ದೆಹಲಿಯಲ್ಲಿ ಕರೆಯಲಾಗಿರುವ ನೀತಿ ಆಯೋಗದ ಸಭೆಯನ್ನು ಬಹಿಷ್ಕರಿಸಲು ನಮ್ಮ ಸರ್ಕಾರ ನಿರ್ಧರಿಸಿದೆ ಎಂದು ಸ್ಪಷ್ಟಪಡಿಸಿದರು.

Ad Widget . Ad Widget . Ad Widget .

ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿರುವ ಸಿಎಂ ಸಿದ್ದರಾಮಯ್ಯ, ಇಂದು ಮಂಡಿಸಲಾದ 2024-25ರ ಸಾಲಿನ ಬಜೆಟ್ ನೋಡಿದ ನಂತರ ನಮಗೆ ಕೇಂದ್ರ ಸರ್ಕಾರದ ಮೇಲಿನ ವಿಶ‍್ವಾಸವೇ ಹೊರಟುಹೋಗಿದೆ. ಬಜೆಟ್ ನಲ್ಲಿ ರೈತರ ಕಲ್ಯಾಣದ ಕಾಳಜಿ ವ್ಯಕ್ತಪಡಿಸಿರುವ ಹಣಕಾಸುವ ಸಚಿವರು ನಮ್ಮ ಬಹುದಿನಗಳ ಬೇಡಿಕೆಯಾಗಿರುವ ಮೇಕೆದಾಟು ಯೋಜನೆಯ ಬಗ್ಗೆ ಪ್ರಸ್ತಾವವನ್ನೇ ಮಾಡಿಲ್ಲ. ಭದ್ರಾ ಮೇಲ್ದಂಡೆಗೆ ವಿಶೇಷ ನೆರವು ನೀಡುವ ತಮ್ಮದೇ ಭರವಸೆಯನ್ನೂ ಉಳಿಸಿಕೊಳ್ಳಲಿಲ್ಲ. ಕಳಸಾ -ಬಂಡೂರಿ ಯೋಜನೆಯನ್ನೂ ನಿರ್ಲಕ್ಷಿಸಲಾಗಿದೆ. ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಶನ್ ಮೆಟ್ರೋ 3ನೇ ಹಂತದ ಯೋಜನೆ ಮತ್ತು ಬೆಂಗಳೂರು ನಗರದ ಉದ್ದೇಶಿತ ಅಷ್ಟಪಥ ಪೆರಿಫೆರಲ್ ರಿಂಗ್ ರೋಡ್ ನಿರ್ಮಾಣಕ್ಕೆ ಅಗತ್ಯ ಅನುಮತಿ ಮತ್ತು ಅನುದಾನವನ್ನೂ ನೀಡಿಲ್ಲ ಎಂದು ಅಸಮಾಧಾನ ಹೊರಹಾಕಿದ್ದಾರೆ.

ದೇಶದಲ್ಲಿ 28 ರಾಜ್ಯಗಳು ಮತ್ತು ಎಂಟು ಕೇಂದ್ರಾಡಳಿತ ಪ್ರದೇಶಗಳಿವೆ ಎನ್ನುವುದನ್ನು ನರೇಂದ್ರ ಮೋದಿ ಸರ್ಕಾರ ಮರೆತಂತಿದೆ. ಆಂಧ್ರಪ್ರದೇಶ ಮತ್ತು ಬಿಹಾರ ರಾಜ್ಯಗಳಿಗೆ ಸುರಿದಿರುವ ವಿಶೇಷ ಅನುದಾನದ ಸುರಿಮಳೆಯನ್ನು ನೋಡಿದರೆ ನರೇಂದ್ರ ಮೋದಿಯವರ ಲೆಕ್ಕಾಚಾರದಲ್ಲಿ ಆ ಎರಡು ರಾಜ್ಯಗಳು ಮಾತ್ರ ಅಸ್ತಿತ್ವದಲ್ಲಿರುವ ಹಾಗೆ ಕಾಣುತ್ತಿದೆ. ಇದು ಪ್ರಜಾಪ್ರಭುತ್ವ ವಿರೋಧಿ ನಿಲುವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Leave a Comment

Your email address will not be published. Required fields are marked *