ಸಮಗ್ರ ನ್ಯೂಸ್: ನೇಪಾಳದ ಕಠ್ಮಂಡುವಿನಲ್ಲಿ ಟೇಕ್ ಆಪ್ ಆಗುವ ವೇಳೆ 19 ಪ್ರಯಾಣಿಕರಿದ್ದ ಶೌರ್ಯ ವಿಮಾನ ಪತನಗೊಂಡಿದೆ ಎಂದು ವಿಮಾನ ನಿಲ್ದಾಣದ ಅಧಿಕಾರಿ ಉಲ್ಲೇಖಿಸಿದ್ದಾರೆ. ವಿಮಾನದಲ್ಲಿ ಸಾಮಾನ್ಯ ಪ್ರಯಾಣಿಕರು ಇರಲಿಲ್ಲ, ಆದರೆ ತಾಂತ್ರಿಕ ತಂಡದ 19 ಸದಸ್ಯರು ವಿಮಾನದಲ್ಲಿದ್ದರು. ಅಪಘಾತಕ್ಕೆ ಕಾರಣ ಏನು ಅನ್ನೋದು ಇನ್ನೂ ತಿಳಿದು ಬಂದಿಲ್ಲ. 19 ಸದಸ್ಯರ ಸಾವಿನ ಶಂಕೆ ವ್ಯಕ್ತವಾಗಿದೆ. ಆದರೆ ಎಷ್ಟು ಮಂದಿ ಸಾವನ್ನಪ್ಪಿದ್ದಾರೆ ಅನ್ನೋದರ ಕುರಿತು ಖಚಿತ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ. ಅಪಘಾತ ನಡೆದ ಸ್ಥಳದಿಂದ ಇದುವರೆಗೆ ಐದು ಮೃತದೇಹಗಳನ್ನು ಹೊರತೆಗೆಯಲಾಗಿದೆ. ವಿಮಾನದ ಪೈಲಟ್ ಕ್ಯಾಪ್ಟನ್ ಮನೀಶ್ ಶಾಕ್ಯಾ (37) ಅವರನ್ನು ರಕ್ಷಿಸಿ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ನೇಪಾಳದ ಕಠ್ಮಂಡುವಿನ ತ್ರಿಭುವನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬುಧವಾರ ಶೌರ್ಯ ಏರ್‌ಲೈನ್ಸ್ ವಿಮಾನ ಟೇಕಾಫ್ ಆಗುವ ವೇಳೆ ಪತನಗೊಂಡಿದೆ. ಇಂದು ಬೆಳಗ್ಗೆ 11 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದ ಪೋಖರಾ ವಿಮಾನದಲ್ಲಿ ವಿಮಾನ ಸಿಬ್ಬಂದಿ ಸೇರಿದಂತೆ 19 ಮಂದಿ ಇದ್ದರು ಎಂದು ಟಿಐಎ ವಕ್ತಾರ ಪ್ರೇಮನಾಥ್ ಠಾಕೂರ್ ತಿಳಿಸಿದ್ದಾರೆ. ಅಪಘಾತ ಸ್ಥಳದಲ್ಲಿ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.