Ad Widget .

ಪ್ಯಾರಿಸ್ ಒಲಿಂಪಿಕ್ಸ್‌ ೨೦೨೪/ ಇಂದಿನಿಂದ ಪಂದ್ಯಾವಳಿಗಳು ಶುರು

ಸಮಗ್ರ ನ್ಯೂಸ್‌: ಬಹುನಿರೀಕ್ಷಿತ ಪ್ಯಾರಿಸ್ ಒಲಿಂಪಿಕ್ಸ್‌ಗೆ ಇಂದು ಚಾಲನೆ ದೊರೆಯಲಿದ್ದು, ಪಂದ್ಯಾವಳಿಗಳು ಇಂದಿನಿಂದ ಶುರುವಾಗಲಿದೆ. ಒಲಿಂಪಿಕ್ಸ್‌ ಕ್ರೀಡಾಕೂಟದ ಉದ್ಘಾಟನಾ ಸಮಾರಂಭವನ್ನು ಜುಲೈ 26 ಕ್ಕೆ ನಿಗದಿಪಡಿಸಲಾಗಿದ್ದರೂ, ಇಂದು ಫುಟ್‌ಬಾಲ್ ಪಂದ್ಯದೊಂದಿಗೆ ಪ್ಯಾರಿಸ್ ಒಲಿಂಪಿಕ್ಸ್‌ಗೆ ಚಾಲನೆ ದೊರೆಯಲಿದೆ. ಮೊದಲ ಪಂದ್ಯದಲ್ಲಿ ಅರ್ಜೆಂಟೀನಾ ಮತ್ತು ಮೊರಾಕ್ಕೊ ತಂಡಗಳು ಮುಖಾಮುಖಿಯಾಗಲಿದೆ.

. Ad Widget . . Ad Widget . Ad Widget Ad Widget . Ad Widget . Ad Widget . Ad Widget . Ad Widget . Ad Widget . Ad Widget .

ಒಲಿಂಪಿಕ್ಸ್ ಉದ್ಘಾಟನಾ ಸಮಾರಂಭಕ್ಕೂ ಮುನ್ನ ಪಂದ್ಯಾವಳಿ ಆರಂಭಿಸುವ ಸಂಪ್ರದಾಯ ಶುರುವಾಗಿದ್ದು, 1992 ರಲ್ಲಿ. ಬಾರ್ಸಿಲೋನಾ ಒಲಿಂಪಿಕ್ಸ್‌ನಲ್ಲಿ ಮೊದಲ ಬಾರಿಗೆ ಉದ್ಘಾಟನೆಗೂ ಮುನ್ನ ಕೆಲ ಪಂದ್ಯಗಳನ್ನು ನಡೆಸಲಾಗಿತ್ತು. ಇದಾದ ಬಳಿಕ ಪ್ರತಿ ಒಲಿಂಪಿಕ್ಸ್‌ನಲ್ಲೂ ಈ ಸಾಂಪ್ರದಾಯ ಮುಂದುವರೆಸಲಾಗಿದೆ.

Ad Widget . Ad Widget . Ad Widget .

ಇದಕ್ಕೆ ಮುಖ್ಯ ಕಾರಣವೆಂದರೆ ಆಟಗಾರರ ವಿಶ್ರಾಂತಿ. ಅಂದರೆ ಫುಟ್ ಬಾಲ್, ರಗ್ನಿ, ಬಾಸ್ಕೆಟ್‌ಬಾಲ್‌ನಂತಹ ಕ್ರೀಡೆಗಳಲ್ಲಿ ಕಣಕ್ಕಿಳಿಯುವ ಆಟಗಾರರಿಗೆ ಹೆಚ್ಚಿನ ವಿಶ್ರಾಂತಿಯ ಅಗತ್ಯವಿರುತ್ತದೆ. ಹೀಗಾಗಿ ಒಂದು ಪಂದ್ಯದಿಂದ ಮತ್ತೊಂದು ಪಂದ್ಯಕ್ಕೆ 48 ಗಂಟೆಗಳ ವಿಶ್ರಾಂತಿ ನೀಡುವ ಸಲುವಾಗಿ ಉದ್ಘಾಟನೆಗೂ ಮುನ್ನ ಕೆಲ ಪಂದ್ಯಗಳನ್ನು ಆಯೋಜಿಸಲಾಗುತ್ತದೆ.

Leave a Comment

Your email address will not be published. Required fields are marked *